bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 2
1 Samuel 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 3 →
1
ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.
2
ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.
3
ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.
4
ಶೂರರ ಬಿಲ್ಲುಗಳು ಮುರಿಯಲ್ಪಡುತ್ತವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಾರೆ.
5
ಹೊಟ್ಟೆತುಂಬಾ ಉಣ್ಣುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ. ಹಸಿವುಗೊಂಡವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.
6
ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.
7
ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.
8
ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
9
ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.
10
ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.
11
ಎಲ್ಕಾನನು ರಾಮದಲ್ಲಿದ್ದ ತನ್ನ ಮನೆಗೆ ಹೋದನು; ಹುಡುಗನು ಯಾಜಕನಾದ ಏಲಿಯ ಕೈಕೆಳಗಿದ್ದುಕೊಂಡು ಯೆಹೋವನನ್ನು ಸೇವಿಸುತ್ತಿದ್ದನು.
12
ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.
13
ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು
14
ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.
15
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ - ಯಾಜಕನಿಗೋಸ್ಕರ ಕರಿಯತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವದಿಲ್ಲ; ಅವನಿಗೆ ಹಸೀ ಮಾಂಸವೇ ಬೇಕು ಅನ್ನುವನು.
16
ಅರ್ಪಿಸುವವನು - ಮೊದಲು ಕೊಬ್ಬನ್ನು ಹೋಮಮಾಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ ಎಂದು ಹೇಳಿದಾಗ ಅವನು - ಈಗಲೇ ಕೊಡಬೇಕು: ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುವೆನು ಎನ್ನುವನು.
17
ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.
18
ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.
19
ಅವನ ತಾಯಿಯು ಪ್ರತಿವರುಷವೂ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವದಕ್ಕೆ ಬಂದಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದು ಕೊಡುತ್ತಿದ್ದಳು.
20
ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.
21
ಯೆಹೋವನು ಕಟಾಕ್ಷಿಸಿದದರಿಂದ ಹನ್ನಳಿಗೆ ಮೂರು ಮಂದಿ ಗಂಡು ಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾಗಿದ್ದ ಸಮುವೇಲನು ಯೆಹೋವನ ಸನ್ನಿಧಿಯಲ್ಲೇ ದೊಡ್ಡವನಾದನು.
22
ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -
23
ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತಿರುತ್ತೇನೆ. ಯಾಕೆ ಹೀಗೆ ಮಾಡುತ್ತೀರಿ?
24
ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.
25
ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.
26
ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
27
ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ
28
ಇಸ್ರಾಯೇಲ್ಯರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವದಕ್ಕೂ ಧೂಪಹಾಕುವದಕ್ಕೂ ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವದಕ್ಕೂ ಆರಿಸಿಕೊಂಡು ಅವರಿಗೆ ಇಸ್ರಾಯೇಲ್ಯರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
29
ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?
30
ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.
31
ನಾನು ನಿನ್ನ ಮತ್ತು ನಿನ್ನ ಮನೆಯವರ ಬಾಹುಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದಿಲ್ಲ.
32
ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವದನ್ನು ನೋಡುವಿ. ಇಸ್ರಾಯೇಲ್ಯರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದೇ ಇಲ್ಲ.
33
ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.
34
ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.
35
ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.
36
ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31