bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 20
1 Samuel 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 21 →
1
ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -
2
ಇದು ಆಗಲೇಬಾರದು; ನಿನಗೆ ಮರಣವಾಗಕೂಡದು, ನನ್ನ ತಂದೆಯು ಅಲ್ಪಕಾರ್ಯವನ್ನಾಗಲಿ ಅಧಿಕಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವದಿಲ್ಲ; ಈ ಕಾರ್ಯವನ್ನು ನನಗೆ ಹೇಗೆ ಮರೆಮಾಡಾನು? ಆಗುವದಿಲ್ಲ ಎಂದು ಹೇಳಿದನು.
3
ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.
4
ಆಗ ಯೋನಾತಾನನು ದಾವೀದನಿಗೆ - ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ ಅಂದನು.
5
ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.
6
ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.
7
ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.
8
ಸೇವಕನ ಮೇಲೆ ದಯವಿರಲಿ. ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ; ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವದೇಕೆ? ನೀನೇ ಕೊಂದುಹಾಕು ಎಂದು ಹೇಳಿದನು.
9
ಯೋನಾತಾನನು ಅವನಿಗೆ - ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುವೆನೋ ಅಂದನು.
10
ದಾವೀದನು - ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ ಎಂದು ಅವನನ್ನು ಕೇಳಲು
11
ಯೋನಾತಾನನು ಅವನಿಗೆ - ನಾವು ಅಡವಿಗೆ ಹೋಗೋಣ ಬಾ ಎಂದು ಹೇಳಿದನು.
12
ಅವರಿಬ್ಬರೂ ಅಡವಿಗೆ ಹೋದ ಮೇಲೆ ಯೋನಾತಾನನು ದಾವೀದನಿಗೆ - ಇಸ್ರಾಯೇಲ್ದೇವರಾದ ಯೆಹೋವನೇ ಸಾಕ್ಷಿ; ನಾನು ನಾಳೆ ಇಲ್ಲವೆ ನಾಡದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ ನಿನ್ನ ಮೇಲೆ ಅವನಿಗೆ ದಯವುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.
13
ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.
14
ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು;
15
ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾಗಿ ನಿನ್ನ ದಯವಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂವಿುಯಿಂದ ತೆಗೆದುಹಾಕಿದ ಮೇಲಾದರೂ ಅದು ನನ್ನ ಮನೆಯಿಂದ ಅಗಲದಿರಲಿ.
16
ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿತೀರಿಸಲಿ ಎಂದು ಹೇಳಿ ಅವನ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದದರಿಂದ
17
ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣ ಮಾಡಿಸಿದನು.
18
ಯೋನಾತಾನನು ದಾವೀದನಿಗೆ - ನಾಳೆ ಶುದ್ಧಪಾಡ್ಯವು; ನಿನ್ನ ಸ್ಥಳವು ಬರಿದಾಗಿರುವದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.
19
ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕೂತುಕೊಂಡಿರು.
20
ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ
21
ಅವುಗಳನ್ನು ತರುವದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು. ನಾನು ಅವನಿಗೆ - ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ಹೇಳಿದರೆ ನೀನು ಬಾ; ಯೆಹೋವನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವಿ.
22
ಆದರೆ - ಬಾಣಗಳು ಆಚೆ ಬಿದ್ದಿರುತ್ತವೆ ಎಂದು ಹೇಳಿದರೆ ಹೊರಟುಹೋಗು; ನೀನು ಹೋಗುವದೇ ಯೆಹೋವನ ಚಿತ್ತವಾಗಿದೆ.
23
ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು ಅಂದನು.
24
ದಾವೀದನು ಅಡವಿಯಲ್ಲಿ ಅಡಗಿಕೊಂಡನು.
25
ಅರಸನು ಶುದ್ಧಪಾಡ್ಯದ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿರುವ ತನ್ನ ಆಸನದ ಮೇಲೆ ಭೋಜನಕ್ಕೆ ಕೂತುಕೊಂಡನು. ಅವನ ಎದುರಾಗಿ ಯೋನಾತಾನನೂ ಅವನ ಪಾರ್ಶ್ವದಲ್ಲಿ ಅಬ್ನೇರನೂ ಕೂತುಕೊಂಡರು. ಸೌಲನು ದಾವೀದನ ಸ್ಥಳವು ಬರಿದಾಗಿರುವದನ್ನು ಕಂಡರೂ
26
ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.
27
ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.
28
ಅದಕ್ಕೆ ಯೋನಾತಾನನು - ದಾವೀದನು ಬೇತ್ಲೆಹೇವಿುನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ;
29
ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು.
30
ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.
31
ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.
32
ಅದಕ್ಕೆ ಯೋನಾತಾನನು - ಅವನು ಯಾಕೆ ಸಾಯಬೇಕು, ಅವನು ಏನು ಮಾಡಿದನು ಎಂದು ತನ್ನ ತಂದೆಯನ್ನು ಕೇಳಿದನು.
33
ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವದಕ್ಕೆ ನಿಶ್ಚಯಿಸಿದ್ದಾನೆಂಬದು ಯೋನಾತಾನನಿಗೆ ಗೊತ್ತಾಗಲು
34
ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.
35
ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರಕೊಂಡು ದಾವೀದನನ್ನು ನೋಡುವದಕ್ಕಾಗಿ ಅಡವಿಗೆ ಹೋಗಿ ಹುಡುಗನಿಗೆ -
36
ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.
37
ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ - ಬಾಣವು ನಿನ್ನ ಆಚೆ ಬಿದ್ದಿತಲ್ಲಾ;
38
ಬೇಗ ಹೋಗು, ನಿಲ್ಲಬೇಡ ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
39
ಇದರ ರಹಸ್ಯವು ಯೋನಾತಾನ ದಾವೀದರಿಗೆ ಗೊತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
40
ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು ಎಂದು ಹೇಳಿದನು.
41
ಹುಡುಗನು ಹೋಗುತ್ತಲೆ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು; ದಾವೀದನು ಬಹಳವಾಗಿ ಅತ್ತನು.
42
ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31