bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 22
1 Samuel 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
1
ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.
2
ಇದಲ್ಲದೆ ಕುಗ್ಗಿದವರೂ ಸಾಲಗಾರರೂ ಮನನೊಂದವರೂ ಆಗಿರುವ ಸರ್ವಜನರೂ ಬಂದು ಅವನನ್ನು ಆಶ್ರಯಿಸಿಕೊಳ್ಳಲು ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.
3
ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ದೇಶದ ವಿುಚ್ಪೆ ಎಂಬಲ್ಲಿಗೆ ಕರಕೊಂಡು ಹೋಗಿ ಅಲ್ಲಿನ ಅರಸನನ್ನು - ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಂಡು ಅವರನ್ನು ಅವನ ಬಳಿಯಲ್ಲಿ ಬಿಟ್ಟನು.
4
ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಈ ಅರಸನ ಬಳಿಯಲ್ಲಿ ವಾಸವಾಗಿದ್ದರು.
5
ಗಾದ್ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
6
ಒಂದು ದಿವಸ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಬರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕೂತುಕೊಂಡಿರಲು ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳವು ಗೊತ್ತಾಗಿದೆ ಎಂಬ ಸುದ್ದಿಯು ಅವನಿಗೆ ಮುಟ್ಟಿತು.
7
ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ - ಬೆನ್ಯಾಮೀನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ ಎಲ್ಲರನ್ನೂ ಸಹಸ್ರಾಧಿಪತಿಗಳನ್ನಾಗಲಿ ಶತಾಧಿಪತಿಗಳನ್ನಾಗಲಿ ಮಾಡುವನೋ?
8
ನನ್ನ ಮಗನು ಇಷಯನ ಮಗನೊಡನೆ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲವಲ್ಲಾ; ನನ್ನ ಸೇವಕನು ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎಬ್ಬಿಸಿದನೆಂದು ಒಬ್ಬನಾದರೂ ನನಗೆ ಯಾಕೆ ತಿಳಿಸಲಿಲ್ಲ; ನೀವು ನನ್ನ ಚಿಂತೆಯನ್ನೇ ಬಿಟ್ಟಿರಿ ಅಂದನು.
9
ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.
10
ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.
11
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು ಅರಸನು -
12
ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕೆ ಅವನು - ಒಡೆಯಾ, ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟನು.
13
ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು -
14
ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ?
15
ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.
16
ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -
17
ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.
18
ಆದದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ - ನೀನು ಹೋಗಿ ಅವರನ್ನು ಕೊಲ್ಲು ಎಂದು ಆಜ್ಞಾಪಿಸಲು ಅವನು ನಾರು ಬಟ್ಟೆಯ ಏಫೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.
19
ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.
20
ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು
21
ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಲು ದಾವೀದನು -
22
ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನಸಿಕೊಂಡೆನು. ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!
23
ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವದಾದರೆ ಸುರಕ್ಷಿತನಾಗಿರುವಿ ಅಂದನು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31