bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 25
1 Samuel 25
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 26 →
1
ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.
2
ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;
3
ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹುಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು; ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಧನವಂತನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
4
ನಾಬಾಲನು ಉಣ್ಣೆಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಅರಣ್ಯದಲ್ಲಿದ್ದ ದಾವೀದನಿಗೆ ಮುಟ್ಟಿದಾಗ ಅವನು
5
ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ -
6
ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.
7
ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ.
8
ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವದರಲ್ಲಿ ಕೊಡು ಎಂದು ಹೇಳಿರಿ ಅಂದು ಅವರನ್ನು ಕಳುಹಿಸಿದನು.
9
ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕಾಯುತ್ತಿರಲು
10
ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ!
11
ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.
12
ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ
13
ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
14
ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು.
15
ಆ ಜನರು ನಮಗೆ ಬಹಳ ಉಪಕಾರಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ. ನಷ್ಟಹೊಂದಲಿಲ್ಲ.
16
ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು.
17
ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು.
18
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -
19
ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
20
ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗಟ್ಟಾ ಇಳಿದುಬರಲು ಆಕೆಯು ಅವರನ್ನು ಎದುರುಗೊಂಡಳು.
21
ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.
22
ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.
23
ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.
24
ಆಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ - ಸ್ವಾಮೀ, ಅಪರಾಧವು ನನ್ನ ಮೇಲಿರಲಿ; ನಿನ್ನ ದಾಸಿಯು ಮಾತಾಡುವದಕ್ಕೆ ಅಪ್ಪಣೆಯಾಗಲಿ; ಅವಳ ಮಾತನ್ನು ಲಾಲಿಸಬೇಕು.
25
ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
26
ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
27
ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.
28
ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;
29
ಯಾವನಾದರೂ ನನ್ನ ಸ್ವಾವಿುಯಾದ ನಿನ್ನನ್ನು ಹಿಂಸಿಸಿ ಜೀವತಗೆಯಬೇಕೆಂದಿರುವಾಗ ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಭದ್ರವಾಗಿರಲಿ; ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.
30
ಯೆಹೋವನು ನನ್ನ ಸ್ವಾವಿುಯಾದ ನಿನಗೆ ವಾಗ್ದಾನ ಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ ನಿನ್ನನ್ನು ಇಸ್ರಾಯೇಲ್ ಪ್ರಭುವನ್ನಾಗಿ ಮಾಡಿದ ಮೇಲೆ
31
ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿತೀರಿಸಿದ್ದರಿಂದುಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆತನು ನಿನ್ನನ್ನು ಮಹಾಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ ಅಂದಳು.
32
ಆಗ ದಾವೀದನು ಅಬೀಗೈಲಳಿಗೆ - ಈಹೊತ್ತು ನನ್ನನ್ನು ಎದುರುಗೊಳ್ಳುವದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
33
ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಬುದ್ಧಿಯೂ ಸ್ತೋತ್ರಾರ್ಹವೇ ಸರಿ.
34
ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ
35
ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ - ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ ಅಂದನು.
36
ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
37
ಮರುದಿನ ಅಮಲಿಳಿದನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ ಅವನ ಹೃದಯವು ನಿಂತುಹೋಯಿತು, ಅವನು ಸ್ತಬ್ಧನಾದನು.
38
ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.
39
ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;
40
ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ - ದಾವೀದನು ನಿನ್ನನ್ನು ತನಗೆ ಹೆಂಡತಿಯಾಗುವದಕ್ಕೆ ಕರಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ ಅಂದಾಗ
41
ಆಕೆ ಎದ್ದು ನಮಸ್ಕಾರಮಾಡಿ ಮಾತಾಡಿಸಿದವನಿಗೆ - ನಿನ್ನ ದಾಸಿಯಾದ ನಾನು ನನ್ನ ಸ್ವಾವಿುಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವದಕ್ಕೆ ಸಿದ್ಧಳಾಗಿದ್ದೇನೆ ಎಂದು ಉತ್ತರಕೊಟ್ಟು
42
ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.
43
ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
44
ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆಮಾಡಿಕೊಟ್ಟನು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31