bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 8
1 Samuel 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 9 →
1
ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲ್ಯರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.
2
ಅವನ ಚೊಚ್ಚಲ ಮಗನ ಹೆಸರು ಯೋವೇಲ್, ಮರಚಲ ಮಗನ ಹೆಸರು ಅಬೀಯ.
3
ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ
4
ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಅವನಿಗೆ -
5
ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಆದದರಿಂದ ಬೇರೆ ಎಲ್ಲಾ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇವಿುಸು; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ ಅಂದರು.
6
ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -
7
ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.
8
ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.
9
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರವೆಷ್ಟೆಂಬದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ ಎಂದು ಹೇಳಿದನು.
10
ಸಮುವೇಲನು ಅರಸನನ್ನು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ
11
ಅವರಿಗೆ - ಅರಸನ ಅಧಿಕಾರವೆಷ್ಟೆಂದು ಕೇಳಿರಿ - ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
12
ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇವಿುಸುವನು. ಇನ್ನು ಕೆಲವರು ಅವನ ಭೂವಿುಯನ್ನು ಉಳುವವರೂ ಪೈರನ್ನು ಕೊಯ್ಯುವವರೂ ಯುದ್ಧಾಯುಧ, ರಥಸಾಹಿತ್ಯ ಇವುಗಳನ್ನು ಮಾಡುವವರೂ ಆಗಬೇಕು.
13
ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯಮಾಡುವದಕ್ಕೂ ಅಡಿಗೆ ಮಾಡುವದಕ್ಕೂ ರೊಟ್ಟಿಸುಡುವದಕ್ಕೂ ನೇವಿುಸಿಕೊಳ್ಳುವನು.
14
ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.
15
ನಿಮ್ಮ ಧಾನ್ಯದ್ರಾಕ್ಷೆಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ ಪರಿವಾರದವರಿಗೂ ಕೊಡುವನು.
16
ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು.
17
ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವು ಅವನಿಗೆ ದಾಸರಾಗಿರಬೇಕು.
18
ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ; ಆಗ ಆತನು ನಿಮ್ಮನ್ನು ಲಕ್ಷಿಸುವದಿಲ್ಲ ಅಂದನು.
19
ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು;
20
ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು ಎಂದು ಹೇಳಿದರು.
21
ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ ಆತನು ಅವನಿಗೆ -
22
ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇವಿುಸು ಎಂದನು. ಆಗ ಸಮುವೇಲನು ಇಸ್ರಾಯೇಲ್ಯರಿಗೆ - ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ ಎಂದು ಅಪ್ಪಣೆಕೊಟ್ಟನು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31