bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Samuel 9
1 Samuel 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 10 →
1
ಬೆನ್ಯಾಮೀನ್ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಅಫೀಹನ ಮರಿಮಗನೂ ಆದ ಅಬೀಯೇಲನ ಮಗನು.
2
ಇವನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿ ಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಉನ್ನತವಾಗಿದ್ದನು.
3
ಒಂದು ದಿವಸ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದದರಿಂದ ಅವನು ತನ್ನ ಮಗನಾದ ಸೌಲನಿಗೆ - ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವದಕ್ಕೆ ಹೋಗು ಎಂದು ಹೇಳಿದನು.
4
ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾದೇಶ ಇವುಗಳಲ್ಲಿ ಸಂಚರಿಸಿದರೂ ಅವು ಸಿಕ್ಕಲಿಲ್ಲ; ಶಾಲೀಮ್, ಬೆನ್ಯಾಮೀನ್ ಈ ಪ್ರಾಂತಗಳಲ್ಲಿಯೂ ಸಿಕ್ಕಲಿಲ್ಲ.
5
ಕಡೆಗೆ ಅವರು ಚೂಫ್ದೇಶಕ್ಕೆ ಬಂದಾಗ ಅವನು ತನ್ನ ಆಳಿಗೆ - ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿದ್ದಾನು ಅನ್ನಲು ಆ ಆಳು -
6
ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು ಎಂದನು.
7
ಅದಕ್ಕೆ ಸೌಲನು - ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು ಎನ್ನಲು ಆಳು -
8
ಇಗೋ, ನನ್ನ ಕೈಯಲ್ಲಿ ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು ಎಂದು ಉತ್ತರಕೊಟ್ಟನು.
9
(ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)
10
ಆಗ ಸೌಲನು ಆಳಿಗೆ - ನೀನು ಹೇಳುವದು ಒಳ್ಳೇದು; ಹೋಗೋಣ ನಡಿ ಅಂದನು.
11
ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;
12
ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.
13
ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು.
14
ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
15
ಸೌಲನು ಬರುವದಕ್ಕೆ ಒಂದು ದಿವಸ ಮುಂದಾಗಿ ಯೆಹೋವನು ಸಮುವೇಲನಿಗೆ -
16
ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.
17
ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ - ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು ಎಂದು ಸೂಚಿಸಿದನು.
18
ಊರುಬಾಗಲಿಗೆ ಬಂದು ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ - ದರ್ಶಿಯ ಮನೆ ಎಲ್ಲಿದೆ ಎಂಬದನ್ನು ದಯವಿಟ್ಟು ತಿಳಿಸುವಿಯೋ ಎನ್ನಲು ಸಮುವೇಲನು -
19
ನಾನೇ ದರ್ಶಿಯು; ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.
20
ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.
21
ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.
22
ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ -
23
ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು ಅನ್ನಲು
24
ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟು ಅವನಿಗೆ - ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.
25
ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೇ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತಾಡಿದನು.
26
ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು - ಏಳು, ನಿನ್ನನ್ನು ಸಾಗಕಳುಹಿಸುತ್ತೇನೆ ಎಂದು ಎಬ್ಬಿಸಲು ಅವನೆದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ
27
ಸಮುವೇಲನು ಸೌಲನಿಗೆ - ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿಯೊಂದುಂಟು ಎಂದನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31