bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Thessalonians 1
1 Thessalonians 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 2 →
1
ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
2
ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
4
ದೇವರು ಪ್ರೀತಿಸಿದ ಸಹೋದರರೇ, ಆತನು ನಿಮ್ಮನ್ನು ಆದುಕೊಂಡನೆಂಬದನ್ನೂ
5
ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.
6
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.
7
ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.
8
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
9
ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ
10
ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
Jump to:
Chapter 1
Chapter 2
Chapter 3
Chapter 4
Chapter 5
Chapter 2 →
All chapters:
1
2
3
4
5