bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Thessalonians 5
1 Thessalonians 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
1
ಸಹೋದರರೇ, ಈ ಸಂಗತಿಗಳು ನಡೆಯಬೇಕಾದ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವದು ಅವಶ್ಯವಿಲ್ಲ.
2
ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
3
ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
4
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
5
ನೀವೆಲ್ಲರು ಬೆಳಕಿನವರೂ ಹಗಲಿನವರೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
6
ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
7
ನಿದ್ದೆಮಾಡುವವರು ರಾತ್ರಿಯಲ್ಲಿ ನಿದ್ದೆಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
8
ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸಪ್ರೀತಿಗಳೆಂಬ ವಜ್ರಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
9
ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು.
10
ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
11
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
12
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು
13
ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
14
ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
15
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
16
ಯಾವಾಗಲೂ ಸಂತೋಷಿಸಿರಿ; ಎಡೆಬಿಡದೆ ಪ್ರಾರ್ಥನೆಮಾಡಿರಿ;
18
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.
19
ಪವಿತ್ರಾತ್ಮನನ್ನು ನಂದಿಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;
21
ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;
22
ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
23
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.
24
ನಿಮ್ಮನ್ನು ಕರೆಯುವವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
25
ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ.
26
ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
27
ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನ ಆಣೆ ಇಡುತ್ತೇನೆ.
28
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
All chapters:
1
2
3
4
5