bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 1
2 Chronicles 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
1
ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.
2
ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಂದರೆ ಅವರ ಶತಾಧಿಪತಿ ಸಹಸ್ರಾಧಿಪತಿಗಳನ್ನೂ ನ್ಯಾಯಾಧಿಪತಿಗಳನ್ನೂ ಗೋತ್ರಪ್ರಧಾನರಾದ ಇಸ್ರಾಯೇಲ್ ಪ್ರಭುಗಳನ್ನೂ ಕರಿಸಿಕೊಂಡು
3
ಆ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು. ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿಸಿದ ದೇವದರ್ಶನದ ಗುಡಾರವು ಅಲ್ಲಿತ್ತಷ್ಟೆ.
4
ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ
5
ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
6
ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
7
ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು - ನಿನಗೆ ಯಾವ ವರ ಬೇಕು, ಕೇಳಿಕೋ ಎಂದು ಹೇಳಲು ಸೊಲೊಮೋನನು ಆತನಿಗೆ -
8
ನೀನು ನನ್ನ ತಂದೆಯಾದ ದಾವೀದನಿಗೆ ಮಹಾಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.
9
ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.
10
ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.
11
ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.
12
ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.
13
ಆಮೇಲೆ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಯೆರೂಸಲೇವಿುಗೆ ಬಂದು ಇಸ್ರಾಯೇಲ್ ರಾಜ್ಯವನ್ನು ಆಳಿದನು.
14
ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು, ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇವಿುನಲ್ಲಿಟ್ಟುಕೊಂಡು ಉಳಿದವುಗಳನ್ನು ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿರಿಸಿದನು.
15
ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.
16
ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.
17
ರಥಕ್ಕೆ ಆರುನೂರು ರೂಪಾಯಿಗಳಂತೆಯೂ ಕುದುರೆಗೆ ನೂರೈವತ್ತು ರೂಪಾಯಿಗಳಂತೆಯೂ ಕೊಟ್ಟು ರಥಗಳನ್ನೂ ಕುದುರೆಗಳನ್ನೂ ಐಗುಪ್ತದೇಶದಿಂದ ತರಿಸುತ್ತಿದ್ದರು. ಹೀಗೆಯೇ ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36