bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 18
2 Chronicles 18
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 19 →
1
ಯೆಹೋಷಾಫಾಟನಿಗೆ ಬಹಳ ಧನಘನತೆಗಳುಂಟಾದವು. ಅವನು ಅಹಾಬನೊಡನೆ ಬೀಗತನಮಾಡಿ
2
ಕೆಲವು ವರುಷಗಳಾದನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದಾಗ ಅಹಾಬನು ಅವನಿಗೋಸ್ಕರವೂ ಅವನೊಡನೆ ಬಂದ ಜನರಿಗೋಸ್ಕರವೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿ ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರಿಸಿದನು.
3
ಇಸ್ರಾಯೇಲ್ಯರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು - ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೇಯಲ್ಲವೋ. ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು ಎಂದು ಉತ್ತರಕೊಟ್ಟು
4
ಅನಂತರ ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.
5
ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.
6
ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾಧಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು -
7
ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.
8
ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ ಎಂದು ಆಜ್ಞಾಪಿಸಿದನು.
9
ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.
10
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.
11
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.
12
ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.
13
ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ನನ್ನ ದೇವರು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.
14
ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು.
15
ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣ ಮಾಡಿಸಬೇಕು ಅನ್ನಲು
16
ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.
17
ಆಗ ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ? ಎಂದನು.
18
ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.
19
ಯೆಹೋವನು ತನ್ನ ಹತ್ತಿರ ನಿಂತವರನ್ನು - ಇಸ್ರಾಯೇಲ್ಯರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರಕೊಟ್ಟರು.
20
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು. ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು -
21
ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.
22
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
23
ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -
24
ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರಕೊಟ್ಟನು.
25
ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -
26
ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕು ಎಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.
27
ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.
28
ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ಗಿಲ್ಯಾದಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟರು.
29
ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.
30
ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.
31
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.
32
ಅವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
33
ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.
34
ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.
← Chapter 17
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 19 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36