bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 23
2 Chronicles 23
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 24 →
1
ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು.
2
ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಾಯೇಲ್ಯರ ಗೋತ್ರಪ್ರಧಾನರನ್ನೂ ಕೂಡಿಸಲು ಅವರು ಯೆರೂಸಲೇವಿುಗೆ ಬಂದರು.
3
ಕೂಡಿಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಯೆಹೋಯಾದನು ಅವರಿಗೆ - ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅರಸನಾಗತಕ್ಕವನು ಇವನೇ.
4
ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
5
ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು.
6
ಯಾಜಕರೂ ಸೇವೆಯಲ್ಲಿರುವ ಲೇವಿಯರೂ ಹೊರತಾಗಿ ಯಾರೂ ಯೆಹೋವನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಆಜ್ಞಾನುಸಾರವಾಗಿ ಹೊರಗಿರಬೇಕು.
7
ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು ಎಂದು ಹೇಳಿದನು.
8
ಲೇವಿಯರೂ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು [ಸಬ್ಬತ್ ದಿವಸದಲ್ಲಿ ಸೇವಾ ವಿಮುಕ್ತರಾದ] ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದದರಿಂದ ಪ್ರತಿಯೊಬ್ಬನು ಸಬ್ಬತ್ದಿವಸ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಕೂಡಿಸಿಕೊಂಡನು.
9
ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ ಗುರಾಣಿ ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟು
10
ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.
11
ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.
12
ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು.
13
ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.
14
ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.
15
ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಲಿನ ತನಕ ಒಯ್ದು ಅಲ್ಲಿ ಕೊಂದರು.
16
ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.
17
ತರುವಾಯ ಜನರೆಲ್ಲರೂ ಬಾಳ್ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.
18
ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.
19
ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯದಲ್ಲಿ ಸೇರದಂತೆ ಯೆಹೋಯಾದನು ಆಯಾ ಬಾಗಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
20
ಆಮೇಲೆ ಅವನು ಶತಾಧಿಪತಿಗಳು ಶ್ರೀಮಂತರು ಜನನಾಯಕರು ಸಾಧಾರಣಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಲಿನ ಮಾರ್ಗವಾಗಿ ಅರಮನೆಗೆ ಕರಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
21
ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36