bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 3
2 Chronicles 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 4 →
1
ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
2
ಸೊಲೊಮೋನನು ತನ್ನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಿಸುವದಕ್ಕೆ ಪ್ರಾರಂಭಿಸಿದನು.
3
ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮುಂಚಿನ ಮೊಳದ ಪ್ರಕಾರ ಅರುವತ್ತು ಮೊಳ,
4
ಅಗಲವು ಇಪ್ಪತ್ತು ಮೊಳ, ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ. ಸೊಲೊಮೋನನು ಅದರ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.
5
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಿಗೆಗಳಿಂದಲೂ ಆ ಹಲಿಗೆಗಳನ್ನು ತೋರಣ ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕಬಂಗಾರದ ತಗಡಿನಿಂದಲೂ ಹೊದಿಸಿ
6
ಅದನ್ನು ರತ್ನಗಳಿಂದ ಅಲಂಕರಿಸಿದನು. ಆ ಬಂಗಾರವು ಪರ್ವಯಿಮ್ ದೇಶದ್ದು.
7
ಹೀಗೆ ಆಲಯದಲ್ಲಿನ ತೊಲೆ ಹೊಸ್ತಲು ಗೋಡೆ ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.
8
ಇದಲ್ಲದೆ ಅವನು ಮಹಾಪರಿಶುದ್ಧಸ್ಥಳವನ್ನು ಮಾಡಿಸಿದನು. ಅದರ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳ. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
9
ಬಂಗಾರದ ಮೊಳೆಗಳ ತೂಕ ಐವತ್ತು ತೊಲೆ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
10
ಮಹಾ ಪರಿಶುದ್ಧಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
11
ಕೆರೂಬಿಗಳ ರೆಕ್ಕೆಗಳು ಒಟ್ಟಾಗಿ ಇಪ್ಪತ್ತು ಮೊಳ ಉದ್ದವಿದ್ದವು. [ಮೊದಲನೆಯ ಕೆರೂಬಿಯ] ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮನೆಯ ಗೋಡೆಗೆ ತಗುಲಿತು. ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಎರಡನೆಯ ಕೆರೂಬಿಯ ರೆಕ್ಕೆಗೆ ತಗುಲಿತು.
12
ಅದರಂತೆಯೇ ಎರಡನೆಯ ಕೆರೂಬಿಯ ಐದು ಮೊಳ ಉದ್ದವಾದ ಒಂದು ರೆಕ್ಕೆಯು ಮನೆಯ ಗೋಡೆಗೂ ಇನ್ನೊಂದು ರೆಕ್ಕೆಯು ಮೊದಲನೆಯ ಕೆರೂಬಿಯ ರೆಕ್ಕೆಗೂ ತಗುಲಿದ್ದವು.
13
ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧಸ್ಥಳದ ಕಡೆಗೆ ಮುಖಮಾಡಿದ್ದವು.
14
ಸೊಲೊಮೋನನು ಪರದೆಯನ್ನು ನೀಲಧೂಮ್ರರಕ್ತವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.
15
ಇದಲ್ಲದೆ ದೇವಾಲಯದ ಮುಂದೆ ಎರಡು ಕಂಬಗಳನ್ನು ನಿಲ್ಲಿಸಿದನು. ಅವು ಮೂವತ್ತೈದು ಮೊಳ ಎತ್ತರವಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಿದ್ದವು.
16
ಅವನು ಗರ್ಭಗೃಹದ ಸರಪಣಿಯಂತೆ ಸರಪಣಿಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬಹಣ್ಣುಗಳನ್ನು ಕಟ್ಟಿಸಿದನು.
17
ಆ ಕಂಬಗಳನ್ನು ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ ಬಲಗಡೆಯದಕ್ಕೆ ಯಾಕೀನ್ ಎಂದೂ ಎಡಗಡೆಯದಕ್ಕೆ ಬೋವಜ್ ಎಂದೂ ಹೆಸರಿಟ್ಟನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36