bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 35
2 Chronicles 35
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 36 →
1
ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇವಿುನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು.
2
ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇವಿುಸಿ ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಪಡಿಸಿ
3
ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
4
ಇಸ್ರಾಯೇಲ್ಯರ ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ಬರೆದು ನೇವಿುಸಿದಂತೆ ನಿಮ್ಮ ನಿಮ್ಮ ಗೋತ್ರ ವರ್ಗಗಳ ಪ್ರಕಾರ ಸಿದ್ಧರಾಗಿದ್ದು
5
ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಒಂದೊಂದು ಗೋತ್ರಶಾಖೆಗೋಸ್ಕರ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ.
6
ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.
7
ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
8
ಅವನ ಸರದಾರರು ಜನರಿಗೂ ಯಾಜಕರಿಗೂ ಲೇವಿಯರಿಗೂ [ಯಜ್ಞಪಶುಗಳನ್ನು] ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.
9
ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು.
10
ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;
11
ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.
12
ಲೇವಿಯರು ಚರ್ಮಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರ ಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
13
ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.
14
ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಸಿದ್ಧಮಾಡಿದರು.
15
ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.
16
ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು.
17
ಕೂಡಿಬಂದಿದ್ದ ಇಸ್ರಾಯೇಲ್ಯರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.
18
ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.
19
ಈ ಪಸ್ಕಹಬ್ಬವು ಯೋಷೀಯನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ನಡೆಯಿತು.
20
ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
21
ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು.
22
ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.
23
ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ - ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ ಅಂದನು.
24
ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.
25
ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.
26
ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ
27
ಅವನ ಪೂರ್ವೋತ್ತರವೃತ್ತಾಂತವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.
← Chapter 34
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 36 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36