bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 7
2 Chronicles 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 8 →
1
ಸೊಲೊಮೋನನು ಪ್ರಾರ್ಥಿಸುವದನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿಬಿದ್ದು ಸರ್ವಾಂಗ ಹೋಮದ್ರವ್ಯಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು, ಯೆಹೋವನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.
2
ಯೆಹೋವನ ತೇಜಸ್ಸು ಆತನ ಆಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
3
ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.
4
ಅರಸನೂ ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
5
ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.
6
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.
7
ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯು ಸಮರ್ಪಣೆಯಾಗುವ ಸರ್ವಾಂಗ ಹೋಮದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದ್ದರಿಂದ ಅವನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.
8
ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.
9
ತರುವಾಯ ಎಂಟನೆಯ ದಿನದಲ್ಲಿ ಸಭೆ ನೆರೆಯಿತು. ಹೀಗೆ ಏಳು ದಿವಸ ಯಜ್ಞವೇದಿ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡಿಸಿದರು.
10
ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.
11
ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ
12
ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ.
13
ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ
14
ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.
15
ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.
16
ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.
17
ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವದಾದರೆ
18
ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
19
ಆದರೆ ನೀವು ದ್ರೋಹಿಗಳಾಗಿ ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನು ಹಿಂಬಾಲಿಸಿ
20
ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.
21
ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.
22
ಆಗ ಅವರಿಗೆ - ಈ ದೇಶದವರು ತಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ ಎಂಬ ಉತ್ತರ ಸಿಕ್ಕುವದು ಅಂದನು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36