bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Corinthians 11
2 Corinthians 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 12 →
1
ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2
ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.
3
ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.
4
ಯಾಕಂದರೆ ನಾವು ಪ್ರಸಿದ್ಧಿಪಡಿಸದಿದ್ದ ಮತ್ತೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವರು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ ಅವಲಂಬಿಸದೆಯಿದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವದು ಬಹು ಆಶ್ಚರ್ಯ.
5
ಅತಿಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ.
6
ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ನಿಪುಣನಾಗಿದ್ದೇನೆ; ಇದನ್ನು ಎಲ್ಲಾ ಕಾರ್ಯಗಳಲ್ಲಿ ಎಲ್ಲರ ಮುಂದೆ ನಿಮ್ಮ ಪ್ರಯೋಜನಕ್ಕಾಗಿ ತೋರ್ಪಡಿಸಿದ್ದೇವೆ.
7
ಏನು, ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತಾರ್ಥವಾಗಿ ಸಾರಿದ್ದು ಪಾಪಕೃತ್ಯವೋ?
8
ನಿಮ್ಮ ಸೇವೆಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
9
ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
10
ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
11
ಯಾಕೆ ನಿವ್ಮಿುಂದ ಏನೂ ತೆಗೆದುಕೊಳ್ಳುವದಿಲ್ಲ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲ.
12
ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ.
13
ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.
14
ಇದೇನೂ ಆಶ್ಚರ್ಯವಲ್ಲ; ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ
15
ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸುವದಕ್ಕೆ ವೇಷಹಾಕಿಕೊಳ್ಳುವದು ದೊಡ್ಡದಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
16
ನನ್ನನ್ನು ಬುದ್ಧಿಹೀನನೆಂತ ಯಾರೂ ನೆನಸಬಾರದೆಂದು ತಿರಿಗಿ ಹೇಳುತ್ತೇನೆ; ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪಸ್ವಲ್ಪ ಹೊಗಳಿಕೊಳ್ಳಬೇಕೆಂದಿದ್ದೇನೆ.
17
ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವನಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.
18
ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
19
ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
20
ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
21
ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.
22
ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;
23
ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.
24
ಐದುಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
25
ಮೂರು ಸಾರಿ ಸರಕಾರದವರು ಚಡಿಗಳಿಂದ ನನ್ನನ್ನು ಹೊಡಿಸಿದರು; ಒಂದು ಸಾರಿ ಜನರು ನನ್ನನ್ನು ಕೊಲ್ಲುವದಕ್ಕೆ ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
26
ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
27
ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
28
ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ.
29
ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?
30
ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.
31
ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
32
ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು
33
ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 12 →
All chapters:
1
2
3
4
5
6
7
8
9
10
11
12
13