bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Corinthians 13
2 Corinthians 13
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
1
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸಂಗತಿ ಸ್ಥಾಪಿತವಾಗಬೇಕು.
2
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.
3
ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.
4
ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.
5
ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.
6
ನಾವಂತೂ ಅಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವದೆಂಬದಾಗಿ ನಿರೀಕ್ಷಿಸುತ್ತೇನೆ.
7
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.
8
ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು; ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.
9
ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷವಾಗಿದ್ದೇವೆ. ಇದಲ್ಲದೆ ನೀವು ಪೂರ್ಣಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
10
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.
11
ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.
12
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13
ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
All chapters:
1
2
3
4
5
6
7
8
9
10
11
12
13