bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 15
2 Kings 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 16 →
1
ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
2
ಇವನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಇವನ ತಾಯಿ.
3
ಇವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
4
ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
5
ಯೆಹೋವನು ಇವನನ್ನು ಕುಷ್ಠ ರೋಗದಿಂದ ಬಾಧಿಸಿದನು. ಆದದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು; ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
6
ಅಜರ್ಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
7
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
8
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.
9
ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
10
ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
11
ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲ್ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
12
ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.
13
ಯೆಹೂದದ ಅರಸನಾದ ಉಜ್ಜೀಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
14
ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
15
ಶಲ್ಲೂಮನ ಉಳಿದ ಚರಿತ್ರೆಯೂ ಅವನ ಒಳಸಂಚಿನ ವಿವರವೂ ಇಸ್ರಾಯೇಲ್ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
16
ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.
17
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
18
ಇವನು ಜೀವದಿಂದಿರುವವರೆಗೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
19
ಅಶ್ಶೂರ್ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
20
ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.
21
ಮೆನಹೇಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
22
ಅವನು ಪಿತೃಗಳ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಅರಸನಾದನು.
23
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತನೆಯ ವರುಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.
24
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
25
ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
26
ಪೆಕಹ್ಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
27
ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರುಷ ಆಳಿದನು.
28
ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
29
ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.
30
ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
31
ಪೆಕಹನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
32
ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.
33
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
34
ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;
35
ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿದವನು ಇವನೇ.
36
ಯೋತಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
37
ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
38
ಯೋತಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬಶ್ಮಶಾನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25