bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 20
2 Kings 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 21 →
1
ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
2
ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ -
3
ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
4
ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವದಕ್ಕೆ ಮೊದಲು ಯೆಹೋವನು ಅವನಿಗೆ -
5
ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.
6
ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು.
7
ಯೆಶಾಯನು ಒಂದು ಅಂಜೂರಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.
8
ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -
9
ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.
10
ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.
11
ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.
12
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಬೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.
13
ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
14
ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದವರು ಎಂದು ಉತ್ತರ ಕೊಟ್ಟನು.
15
ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.
16
ಆಗ ಅವನು ಹಿಜ್ಕೀಯನಿಗೆ - ಯೆಹೋವನ ಮಾತನ್ನು ಕೇಳು; ಆತನು -
17
ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.
18
ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.
19
ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.
20
ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
21
ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25