bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 23
2 Kings 23
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
1
ಅನಂತರ ಅರಸನು ದೂತರ ಮುಖಾಂತರವಾಗಿ ಯೆರೂಸಲೇವಿುನ ಮತ್ತು ಯೆಹೂದ ಪ್ರಾಂತದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರಿಸಿ
2
ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ
3
ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.
4
ತರುವಾಯ ಅವನು ಮಹಾಯಾಜಕನಾದ ಹಿಲ್ಕೀಯನು, ಎರಡನೆಯ ತರಗತಿಯ ಯಾಜಕರು, ದ್ವಾರಪಾಲಕರು ಇವರ ಮುಖಾಂತರವಾಗಿ ಬಾಳ್, ಅಶೇರ ಎಂಬ ದೇವತೆಗಳಿಗೋಸ್ಕರವೂ ಆಕಾಶ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
5
ಇದಲ್ಲದೆ ಯೆಹೂದ ಪ್ರಾಂತದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಸುತ್ತಣ ಪ್ರದೇಶದಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳನಿಗೂ ಸೂರ್ಯಚಂದ್ರನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಸುಡುವದಕ್ಕಾಗಿ ಯೆಹೂದರಾಜರಿಂದ ನೇವಿುಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
6
ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.
7
ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗೋಸ್ಕರ ಗುಡಾರಗಳನ್ನು ನೇಯುತ್ತಿದ್ದರು.
8
ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿಬಿಟ್ಟನು.
9
ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ ಅವರಿಗೆ ಯೆರೂಸಲೇವಿುನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವದಕ್ಕೆ ಅಪ್ಪಣೆಯಿರಲಿಲ್ಲ.
10
ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.
11
ಯೆಹೂದರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಲಿನ ಹೊರಗೆ ಪರ್ವರೀಮೆಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.
12
ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ಹಳ್ಳದಲ್ಲಿ ಹಾಕಿಸಿದನು.
13
ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.
14
ಕಲ್ಲುಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
15
ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.
16
ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು; ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.
17
ಇದಲ್ಲದೆ ಅವನು ಒಂದು ಸಮಾಧಿಶಿಲೆಯನ್ನು ಕಂಡು ಅದೇನೆಂದು ವಿಚಾರಿಸಲು ಆ ಊರಿನವರು - ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿಯೆಂದು ಉತ್ತರಕೊಟ್ಟರು.
18
ಆಗ ಅವನು - ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು ಎಂದು ಹೇಳಿದನು. ಆದದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
19
ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಕಟ್ಟಿಸಿದಂಥ ಯೆಹೋವನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.
20
ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.
21
ಅನಂತರ ಅರಸನು ಎಲ್ಲಾ ಜನರಿಗೆ - ಈ ನಿಬಂಧನಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.
22
ಇಂಥ ಪಸ್ಕ ಹಬ್ಬವು ಇಸ್ರಾಯೇಲ್ಯರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.
23
ಈ ಹಬ್ಬವು ಅರಸನಾದ ಯೋಷೀಯನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಚರಿಸಲ್ಪಟ್ಟಿತು.
24
ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.
25
ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.
26
ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
27
ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.
28
ಯೋಷೀಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
29
ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.
30
ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.
31
ಯೆಹೋವಾಹಾಜನು ಅರಸನಾದಾಗ ಇಪ್ಪತ್ತ ಮೂರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಅದ ಹಮೂಟಲ್ ಎಂಬಾಕೆಯು ಇವನ ತಾಯಿ.
32
ಇವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
33
ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.
34
ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮೃತಿಹೊಂದಿದನು.
35
ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ಕರವನ್ನು ನೇವಿುಸಿದನು. ಕರಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ಕೂಡಿಸಿ ಫರೋಹನಿಗೋಸ್ಕರ ತಂದೊಪ್ಪಿಸಿದನು.
36
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆಯು ಅವನ ತಾಯಿ.
37
ಅವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25