bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 24
2 Kings 24
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 25 →
1
ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.
2
ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.
3
ಯೆರೂಸಲೇಮನ್ನು ನಿರಪರಾಧರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷವಿುಸದೆ ಹೋದನು;
4
ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.
5
ಯೆಹೋಯಾಕೀಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತವೆ.
6
ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.
7
ಬಾಬೆಲಿನ ಅರಸನು ಐಗುಪ್ತದ ಹಳ್ಳಕ್ಕೂ ಯೂಫ್ರೇಟೀಸ್ ನದಿಗೂ ಮಧ್ಯದಲಿದ್ದ ಐಗುಪ್ತ ರಾಜನ ಎಲ್ಲಾ ದೇಶವನ್ನು ಸ್ವಾಧೀನಮಾಡಿಕೊಂಡನು. ಅಂದಿನಿಂದ ಐಗುಪ್ತದ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.
8
ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಯೆರೂಸಲೇವಿುನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.
9
ಇವನು ತನ್ನ ತಂದೆಯಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
10
ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇವಿುಗೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.
11
ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.
12
ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.
13
ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
14
ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.
15
ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು
16
ದೇಶದ ಪ್ರಧಾನಪುರುಷರು ಇವರನ್ನೂ ಏಳು ಸಾವಿರ ಮಂದಿ ಭಟರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಒಯ್ದನು; ಅವರೆಲ್ಲರೂ ಪುಷ್ಟರೂ ರಣವೀರರೂ ಆಗಿದ್ದರು.
17
ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು.
18
ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರುಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದವಳೂ ಯೆರೆವಿುಯಾನ ಮಗಳೂ ಆದ ಹಮೂಟಲ್ ಎಂಬಾಕೆಯು ಇವನ ತಾಯಿ.
19
ಇವನು ಯೆಹೋಯಾಕೀಮನಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.
20
ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 25 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25