bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 3
2 Kings 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 4 →
1
ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರುಷ ಆಳಿದನು.
2
ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲವಾದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆಯು ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.
3
ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.
4
ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸನಾದ ಮೇಷನೆಂಬವನು ಇಸ್ರಾಯೇಲ್ಯರ ಅರಸನಿಗೆ ಲಕ್ಷ ಕುರಿಗಳ ಮತ್ತು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.
5
ಆದರೆ ಅಹಾಬನು ಮರಣಹೊಂದಿದನಂತರ ಇವನು ಇಸ್ರಾಯೇಲ್ಯರ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
6
ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು
7
ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ - ಮೋವಾಬ್ಯರ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ; ಮೋವಾಬ್ಯರೊಡನೆ ಯುದ್ಧಮಾಡುವದಕ್ಕೆ ನೀನು ನನ್ನ ಜೊತೆಯಲ್ಲಿ ಬರುತ್ತೀಯೋ ಎಂದು ಹೇಳಿಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು - ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇಯಲ್ಲವೋ ಎಂದು ಉತ್ತರಕೊಟ್ಟು
8
ಯಾವ ಮಾರ್ಗವಾಗಿ ಹೋಗಬೇಕೆಂದು ವಿಚಾರಿಸಿದಾಗ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಅಂದನು.
9
ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -
10
ಅಯ್ಯೋ! ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ ಎಂದು ಗೋಳಾಡಿದನು.
11
ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.
12
ಯೆಹೋಷಾಫಾಟನು - ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು ಅಂದದರಿಂದ ಇಸ್ರಾಯೇಲ್ ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
13
ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.
14
ಆಗ ಎಲೀಷನು - ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿದ್ದಿಲ್ಲ, ಲಕ್ಷಿಸುತ್ತಿದ್ದಿಲ್ಲ.
15
ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)
16
ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ;
17
ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ.
18
ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.
19
ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು ಎಲ್ಲಾ ಹಣ್ಣಿನ ಮರಗಳನ್ನು ಕಡಿದುಹಾಕಿ ಬಾವಿಗಳನ್ನು ಮುಚ್ಚಿಬಿಟ್ಟು ಹೊಲಗಳನ್ನು ಕಲ್ಲು ತುಂಬಿಸಿ ಹಾಳು ಮಾಡುವಿರಿ ಎಂದು ನುಡಿದನು.
20
ಪ್ರಾತಃಕಾಲನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋವಿುನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.
21
ಅರಸುಗಳು ತಮಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಶಕ್ತರಾದ ಎಲ್ಲಾ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಮೇರೆಗೆ ಬಂದು ಬೆಳಿಗ್ಗೆ ಎದ್ದು ನೋಡಲು
22
ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -
23
ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಸಂಹೃತರಾಗಿರಬೇಕು; ಮೋವಾಬ್ಯರೇ, ಏಳಿರಿ, ಸುಲಿಗೆಗೆ ಹೋಗೋಣ ಎಂದು ಕೂಗಿಕೊಂಡು
24
ಇಸ್ರಾಯೇಲ್ಯರ ಪಾಳೆಯಕ್ಕೆ ಹೋದರು. ಆದರೆ ಇಸ್ರಾಯೇಲ್ಯರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸುತ್ತಾ
25
ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.
26
ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು.
27
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25