bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 6
2 Kings 6
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 7 →
1
ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.
2
ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -
3
ದಯವಿಟ್ಟು ನೀನೂ ನಿನ್ನ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು ಎಂದು ಬೇಡಿಕೊಂಡನು. ಎಲೀಷನು - ಬರುತ್ತೇನೆ ಎಂದು ಹೇಳಿ ಅವರೊಡನೆ ಹೊರಟನು.
4
ಅವರು ಯೊರ್ದನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ
5
ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.
6
ದೇವರ ಮನುಷ್ಯನು ಅವನನ್ನು - ಅದು ಎಲ್ಲಿ ಬಿದ್ದಿತು ಎಂದು ಕೇಳಲು ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಕೊಡಲಿಯು ತೇಲಾಡಿತು.
7
ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
8
ಅರಾಮ್ಯರ ಅರಸನು ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತು ಮಾಡುವಷ್ಟು ಸಾರಿ
9
ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು.
10
ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲ್ಯರ ಅರಸನು ಹೇಳಿಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
11
ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಪತಿಗಳನ್ನು ಕರೆದು ಅವರನ್ನು - ನಮ್ಮವರಲ್ಲಿ ಇಸ್ರಾಯೇಲ್ಯರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವದಿಲ್ಲವೋ ಎಂದು ಕೇಳಿದನು.
12
ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.
13
ಅರಸನು ಇದನ್ನು ಕೇಳಿ - ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಸುತ್ತೇನೆ ಎಂದು ಹೇಳಿದನು. ಪ್ರವಾದಿಯು ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು
14
ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆಹಾಕಿದರು.
15
ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.
16
ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ -
17
ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.
18
ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
19
ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.
20
ಅವರು ಸಮಾರ್ಯದೊಳಗೆ ಬಂದಾಗ ಎಲೀಷನು - ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ ಎಂದು ಯೆಹೋವನನ್ನು ಬೇಡಿಕೊಂಡದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
21
ಇಸ್ರಾಯೇಲ್ಯರ ಅರಸನು ಅವರನ್ನು ಕಂಡು ಎಲೀಷನಿಗೆ - ಅಪ್ಪಾ, ನಾನು ಇವರನ್ನು ಸಂಹರಿಸಲೋ ಸಂಹರಿಸಲೋ ಎಂದು ಕೇಳಲು ಅವನು - ಬೇಡ;
22
ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವಿಯೋ? ಇವರಿಗೆ ಅನ್ನಪಾನಗಳನ್ನು ಕೊಡು; ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ ಎಂದು ಉತ್ತರಕೊಟ್ಟನು.
23
ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ.
24
ಆಮೇಲೆ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆಹಾಕಿದನು.
25
ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
26
ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.
27
ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ
28
ನಿನಗಿರುವ ದುಃಖ ಯಾವದು ಎಂದು ಕೇಳಿದನು. ಆಗ ಆಕೆಯು - ಈ ಸ್ತ್ರೀಯು ನನಗೆ - ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ಹೊತ್ತು ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ ಎಂದು ಹೇಳಿದ್ದರಿಂದ
29
ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು. ಮರುದಿವಸ ನಾನು ಈಕೆಗೆ - ಈಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ ಅಂದಾಗ ಈಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು ಎಂದು ಹೇಳಿದಳು.
30
ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣೀತಟ್ಟು ಇರುವದು ಜನರಿಗೆ ಕಂಡಿತು.
31
ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು.
32
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.
33
ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 7 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25