bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Samuel 1
2 Samuel 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 2 →
1
ಸೌಲನು ಸತ್ತನಂತರ ಸಂಭವಿಸಿದ್ದು. ದಾವೀದನು ಅಮಾಲೇಕ್ಯರನ್ನು ಹೊಡೆದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ಇದ್ದನು.
2
ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
3
ದಾವೀದನು ಅವನನ್ನು - ನೀನು ಎಲ್ಲಿಂದ ಬಂದಿ ಎಂದು ಕೇಳಲು ಅವನು - ನಾನು ಇಸ್ರಾಯೇಲ್ಯರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು ಎಂದು ಉತ್ತರಕೊಟ್ಟನು.
4
ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು.
5
ದಾವೀದನು ವರ್ತಮಾನತಂದ ಆ ಪ್ರಾಯಸ್ಥನಿಗೆ - ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವದು ನಿನಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಲು ಅವನು -
6
ನಾನು ಅಕಸ್ಮಾತ್ತಾಗಿ ಗಿಲ್ಬೋವಪರ್ವತ ಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವದನ್ನೂ ರಥಿಕರೂ ರಾಹುತರೂ ಅವನನ್ನು ಹಿಂದಟ್ಟಿ ಬರುತ್ತಿರುವದನ್ನೂ ಕಂಡೆನು.
7
ಅವನು ತಿರುಗಿಕೊಂಡು ನನ್ನನ್ನು ಕಂಡು ಕರೆದನು.
8
ನಾನು - ಇಗೋ, ಬಂದೆನು ಎಂದು ಹೇಳಿ ಹೋದಾಗ ಅವನು - ನೀನಾರು ಎಂದು ಕೇಳಿದ್ದಕ್ಕೆ - ಅಮಾಲೇಕ್ಯನೆಂದು ಉತ್ತರ ಕೊಟ್ಟೆನು.
9
ಆಗ ಅವನು ನನಗೆ - ನೀನು ಕೃಪೆಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವದರಿಂದ ನನಗೆ ಸಂಕಟ ಹಿಡಿದದೆ ಎಂದು ಹೇಳಿದನು.
10
ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.
11
ಸೌಲನೂ ಅವನ ಮಗನಾದ ಯೋನಾತಾನನೂ ಯೆಹೋವನ ಪ್ರಜೆಗಳಾದ ಇಸ್ರಾಯೇಲ್ಯರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ
12
ದಾವೀದನೂ ಅವನ ಜನರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿ ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
13
ದಾವೀದನು ವರ್ತಮಾನ ತಂದ ಪ್ರಾಯಸ್ಥನನ್ನು - ನೀನೆಲ್ಲಿಯವನು ಎಂದು ಕೇಳಿದ್ದಕ್ಕೆ ಅವನು - ನಾನು ಇಸ್ರಾಯೇಲ್ಯರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನ ಮಗನು ಎಂದು ಉತ್ತರಕೊಟ್ಟನು.
14
ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ
15
ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು - ಇವನ ಮೇಲೆ ಬಿದ್ದು ಹೊಡಿ ಎಂದು ಆಜ್ಞಾಪಿಸಲು ಅವನು ಇವನನ್ನು ಹೊಡೆದು ಕೊಂದನು.
16
ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು.
17
ದಾವೀದನು ಸೌಲಯೋನಾತಾನರ ಮೇಲೆ ಬಿಲ್ಲೆಂಬ ಒಂದು ಶೋಕಗೀತವನ್ನು ರಚಿಸಿ
18
ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -
19
ಇಸ್ರಾಯೇಲ್ಯರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣುಪಾಲಾಗಿ ಹೋಯಿತು. ಅಯ್ಯೋ, ಪರಾಕ್ರಮಶಾಲಿಗಳೇ, ಹೇಗೆ ಹತರಾದಿರಿ!
20
ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.
21
ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
22
ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ಭುಜಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
23
ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.
24
ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ; ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?
25
ಅಯ್ಯೋ, ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮಡಿದುಹೋದಿರಿ! ಯೋನಾತಾನನು ನಿಮ್ಮ ಬೆಟ್ಟಗಳಲ್ಲಿ ಹತನಾಗಿ ಬಿದ್ದಿದ್ದಾನಲ್ಲಾ.
26
ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು.
27
ಅಯ್ಯೋ, ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24