bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Samuel 12
2 Samuel 12
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
1
ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.
2
ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
3
ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ದೊಡ್ಡದಾಗುವವರೆಗೆ ಮಗಳಂತೆ ಅವನ ಸಂಗಡಲೂ ಅವನ ಮಕ್ಕಳ ಸಂಗಡಲೂ ಇದ್ದುಕೊಂಡು ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು; ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆ ಮಾಡುತ್ತಿತ್ತು.
4
ಒಂದು ದಿವಸ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಮನಸ್ಸಿಲ್ಲದೆ ಆ ಬಡವನ ಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು ಎಂಬದೇ.
5
ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ - ಯೆಹೋವನಾಣೆ, ಆ ಮನುಷ್ಯನು ಸಾಯಲೇ ಬೇಕು.
6
ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.
7
ಆಗ ನಾತಾನನು ದಾವೀದನನ್ನು ನೋಡಿ - ಆ ಮನುಷ್ಯನು ನೀನೇ. ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ ಹೇಳುವದೇನಂದರೆ - ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದವನೂ ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.
8
ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು; ಅವನ ಹೆಂಡತಿಯರನ್ನು ನಿನ್ನ ಮಗ್ಗಲಿಗೆ ಕೊಟ್ಟೆನು. ಇಸ್ರಾಯೇಲ್ ಮತ್ತು ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದು ಸಾಕಾಗಿರದಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
9
ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.
10
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.
11
ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;
12
ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಪ್ರಕಟವಾಗಿ ನೆರವೇರುವದು ಎಂಬದೇ ಅಂದನು.
13
ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;
14
ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು
15
ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗುವು ಯೆಹೋವನ ಪೆಟ್ಟಿನಿಂದ ಬಹುವಾಗಿ ಅಸ್ವಸ್ಥವಾಯಿತು.
16
ಆದದರಿಂದ ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ ಉಪವಾಸಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿಕಳೆಯುತ್ತಿದ್ದನು.
17
ಅವನ ಮನೆಯ ಹಿರೀಸೇವಕರು ಅವನನ್ನು ಎಬ್ಬಿಸುವದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
18
ಏಳನೆಯ ದಿನದಲ್ಲಿ ಮಗುವು ಸತ್ತಿತು; ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು - ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ ಎಂದು ಮಾತಾಡಿಕೊಳ್ಳುತ್ತಿದ್ದರು.
19
ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವದನ್ನು ದಾವೀದನು ಕಂಡು ಮಗುವು ಮೃತಿಹೊಂದಿತೆಂದು ತಿಳಿದು ಸೇವಕರನ್ನು - ಮಗುವು ಸತ್ತಿತೋ ಎಂದು ಕೇಳಿದನು. ಅವರು - ಹೌದು, ಸತ್ತಿತು ಎಂದು ಉತ್ತರಕೊಟ್ಟರು.
20
ಆಗ ದಾವೀದನು ನೆಲದಿಂದೆದ್ದು ಸ್ನಾನಮಾಡಿ ತೈಲ ಹಚ್ಚಿಕೊಂಡು ತನ್ನ ಬಟ್ಟೆಗಳನ್ನು ಬದಲಿಸಿ ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರತರಿಸಿ ಊಟಮಾಡಿದನು.
21
ಇದನ್ನು ನೋಡಿ ಅವನ ಸೇವಕರು ಅವನಿಗೆ - ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿ; ಹುಡುಗನು ಸತ್ತನಂತರ ಎದ್ದು ಊಟಮಾಡಿದಿ ಅಂದರು.
22
ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.
23
ಈಗ ಸತ್ತಿದ್ದಾನಲ್ಲಾ, ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವದು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವದಿಲ್ಲ ಎಂದು ಉತ್ತರ ಕೊಟ್ಟನು.
24
ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲಮೋನನೆಂದು ಹೆಸರಿಟ್ಟನು. ಯೆಹೋವನು ಹುಡುಗನನ್ನು ಪ್ರೀತಿಸಿದನು;
25
ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.
26
ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡು
27
ದಾವೀದನಿಗೆ ದೂತರ ಮುಖಾಂತರವಾಗಿ - ನಾನು ರಬ್ಬಕ್ಕೆ ಮುತ್ತಿಗೆಹಾಕಿ ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
28
ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ; ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವದು ಎಂದು ಹೇಳಿ ಕಳುಹಿಸಿದನು.
29
ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.
30
ಇದಲ್ಲದೆ ಅವನು ಅವರ ಮಲ್ಕಾಮಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ನಾಲ್ಕು ಸಾವಿರ ತೊಲೆ ತೂಕದ್ದು. ಅದರಲ್ಲಿದ್ದ ಮಣಿಯನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.
31
ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಮಾಡುವದಕ್ಕೂ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇವಿುಗೆ ಬಂದನು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24