bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Samuel 22
2 Samuel 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
1
ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -
2
ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ;
3
ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ನನ್ನ ಶರಣನೂ ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
4
ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
5
ಮರಣಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
6
ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರ್ಲುಗಳು ನನ್ನೆದುರಿನಲ್ಲಿದ್ದವು.
7
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು.
8
ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು; ಆಕಾಶದ ಆಧಾರಗಳು ನಡುಗಿ ಕದಲಿದವು.
9
ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆಹೊರಟು ಸಿಕ್ಕಿದ್ದೆಲ್ಲವನ್ನೂ ದಹಿಸಿ ಕೆಂಡವನ್ನಾಗಿ ಮಾಡಿತು.
10
ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
11
ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
12
ಕತ್ತಲನ್ನೂ ಜಲಮಯವಾಗಿರುವ ನೀಲಮೇಘಗಳನ್ನೂ ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡನು.
13
ಆತನ ಸಾನ್ನಿಧ್ಯಪ್ರಕಾಶದಿಂದ ಉರಿಗೆಂಡಗಳು ಹೊರಟವು.
14
ಯೆಹೋವನು ಆಕಾಶದಿಂದ ಗುಡುಗಿದನು; ಪರಾತ್ಪರನು ಧ್ವನಿಗೊಟ್ಟನು.
15
ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿ ಬಿಟ್ಟನು; ಸಿಡಿಲಿನಿಂದ ಕಳವಳಗೊಳಿಸಿದನು.
16
ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು, ಭೂಮಂಡಲದ ಅಸ್ತಿವಾರಗಳು ತೋರಬಂದವು.
17
ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.
18
ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
19
ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.
20
ಆತನು ನನ್ನನ್ನು ಬಿಡಿಸಿ ವಿಶಾಲಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
21
ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
22
ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
23
ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳಿಂದ ತೊಲಗಿಹೋಗಲಿಲ್ಲ.
24
ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
25
ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
26
ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ
27
ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.
28
ದೀನರನ್ನು ಉದ್ಧರಿಸುತ್ತೀ; ಹವ್ಮಿುನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತೀ.
29
ಯೆಹೋವನೇ, ನನ್ನ ದೀಪವು ನೀನೇ; ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವನು.
30
ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಲಂಘಿಸುವೆನು.
31
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
32
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
33
ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ; ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
34
ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
35
ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
36
ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
37
ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ.
38
ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.
39
ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು; ಅವರು ನನ್ನ ಪಾದದ ಕೆಳಗೆ ಬೀಳುವರು.
40
ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.
41
ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲ ಮಾಡುವೆನು.
42
ಅವರು ಸುತ್ತಲೂ ನೋಡಿದರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
43
ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು; ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
44
ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ; ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
45
ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
46
ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
47
ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ! ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ!
48
ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
49
ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
50
ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು;
51
ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24