bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Samuel 24
2 Samuel 24
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
1
ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.
2
ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು.
3
ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.
4
ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದದರಿಂದ ಅವರು ಇಸ್ರಾಯೇಲ್ಯರನ್ನು ಲೆಕ್ಕಿಸುವದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.
5
ಅವರು ಯೊರ್ದನ್ ಹೊಳೆಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ
6
ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.
7
ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.
8
ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿ ಬಂದರು.
9
ಯೋವಾಬನು ಅರಸನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ; ಯೆಹೂದ್ಯರಲ್ಲಿ ಐದು ಲಕ್ಷ.
10
ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.
11
ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -
12
ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಎಂದು ಆಜ್ಞಾಪಿಸಿದನು.
13
ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.
14
ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.
15
ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
16
ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
17
ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.
18
ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.
19
ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
20
ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರಮಾಡಿ -
21
ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.
22
ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.
23
ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು.
24
ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು
25
ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24