bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Samuel 9
2 Samuel 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 10 →
1
[ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು
2
ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರಕೊಂಡುಬಂದರು. ಅರಸನು ಅವನನ್ನು - ನೀನು ಚೀಬನೋ ಎಂದು ಕೇಳಲು ಅವನು - ನಿನ್ನ ಸೇವಕನಾದ ನಾನು ಚೀಬನೇ ಎಂದು ಉತ್ತರಕೊಟ್ಟನು.
3
ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.
4
ಅರಸನು - ಎಲ್ಲಿರುತ್ತಾನೆ ಎಂದು ಅವನನ್ನು ಕೇಳಲು ಅವನು - ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.
5
ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರಿಸಿದನು.
6
ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.
7
ಆಗ ದಾವೀದನು ಅವನಿಗೆ - ಹೆದರಬೇಡ; ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂವಿುಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಮತ್ತು ನೀನು ಪ್ರತಿದಿನ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು ಎಂದು ಹೇಳಿದನು.
8
ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.
9
ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ - ನಿನ್ನ ಯಜಮಾನನಾದ ಸೌಲನಿಗೂ ಅವನ ಕುಟುಂಬದವರಿಗೂ ಇದ್ದದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.
10
ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.
11
ಚೀಬನು ಅರಸನಿಗೆ - ಒಡೆಯನಾದ ಅರಸನ ಅಪ್ಪಣೆಯಂತೆ ಸೇವಕನು ನಡೆಯುವನು ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
12
ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.
13
ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದದರಿಂದ ಅವನು ಯೆರೂಸಲೇವಿುನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24