bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Thessalonians 1
2 Thessalonians 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 2 →
1
ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -
2
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
4
ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.
5
ದೇವರು ನ್ಯಾಯವಾದ ತೀರ್ಪುಮಾಡುತ್ತಾನೆಂಬದಕ್ಕೆ ನಿಮ್ಮ ತಾಳ್ಮೆಯು ಸ್ಪಷ್ಟವಾದ ನಿದರ್ಶನವಾಗಿದೆ. ಯಾವ ದೇವರಾಜ್ಯಕ್ಕೋಸ್ಕರ ನೀವು ಕಷ್ಟವನ್ನನುಭವಿಸುತ್ತೀರೋ ಅದಕ್ಕೆ ನೀವು ಯೋಗ್ಯರಾಗಬೇಕೆಂಬದೇ ದೇವರ ಅಭಿಪ್ರಾಯ.
6
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
7
ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
8
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.
9
ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
11
ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.
12
ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.
Jump to:
Chapter 1
Chapter 2
Chapter 3
Chapter 2 →
All chapters:
1
2
3