bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Timothy 1
2 Timothy 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 2 →
1
ಕ್ರಿಸ್ತ ಯೇಸುವಿನಲ್ಲಿರುವ ಜೀವವಾಗ್ದಾನವನ್ನು ತಿಳಿಯಪಡಿಸುವದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
2
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
3
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.
4
ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ.
5
ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
6
ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.
7
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
8
ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.
9
ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.
10
ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.
11
ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.
12
ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
13
ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.
14
ನಿನ್ನ ವಶಕ್ಕೆ ಕೊಡಲ್ಪಟ್ಟಿರುವದನ್ನು ಶ್ರೇಷ್ಠವೆಂದು ತಿಳಿದು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಕಾಪಾಡು.
15
ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
16
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;
17
ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು.
18
ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
Jump to:
Chapter 1
Chapter 2
Chapter 3
Chapter 4
Chapter 2 →
All chapters:
1
2
3
4