bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Timothy 4
2 Timothy 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
1
ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -
2
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
3
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4
ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.
5
ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.
6
ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.
7
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ;
8
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
9
ನನ್ನ ಬಳಿಗೆ ಬೇಗ ಬರುವದಕ್ಕೆ ಪ್ರಯತ್ನ ಮಾಡು;
10
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು; ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ.
11
ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ನನಗೆ ಸೇವೆಗಾಗಿ ಉಪಯುಕ್ತನಾಗಿದ್ದಾನೆ.
12
ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
14
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
15
ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
16
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.
17
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
18
ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
19
ಪ್ರಿಸ್ಕಳಿಗೂ ಅಕ್ವಿಲನಿಗೂ ಒನೆಸಿಫೊರನ ಮನೆಯವರಿಗೂ ವಂದನೆ ಹೇಳು.
20
ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವನನ್ನು ವಿುಲೇತದಲ್ಲಿ ಬಿಟ್ಟೆನು.
21
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನಮಾಡು. ಯುಬೂಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ.
22
ಕರ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ.
← Chapter 3
Jump to:
Chapter 1
Chapter 2
Chapter 3
Chapter 4
All chapters:
1
2
3
4