bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 14
Acts 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 15 →
1
ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.
2
ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
3
ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು.
4
ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
5
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
6
ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ
7
ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
8
ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
9
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -
10
ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
11
ಪೌಲನು ಮಾಡಿದ್ದನ್ನು ಗುಂಪುಕೂಡಿದ್ದ ಜನರು ನೋಡಿ - ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
12
ಬಾರ್ನಬನನ್ನು ದ್ಯೌಸ್ದೇವರೆಂತಲೂ ಪೌಲನು ಮಾತಾಡುವದರಲ್ಲಿ ಮುಖ್ಯನಾದ್ದರಿಂದ ಅವನನ್ನು ಹೆರ್ಮೆದೇವರೆಂತಲೂ ಅಂದುಕೊಂಡರು.
13
ಊರ ಮುಂದಿದ್ದ ದ್ಯೌಸ್ದೇವರ ದೇವಸ್ಥಾನದ ಪೂಜಾರಿಯು ಎತ್ತುಗಳನ್ನೂ ಹೂವಿನ ಹಾರಗಳನ್ನೂ ಊರ ಬಾಗಿಲಿನ ಹತ್ತರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
14
ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ -
15
ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
16
ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.
17
ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.
18
ಅವರು ಈ ಮಾತುಗಳನ್ನು ಹೇಳಿದರೂ ಜನರನ್ನು ತಮಗೆ ಬಲಿಕೊಡದಂತೆ ತಡೆಯುವದು ಕಷ್ಟವಾಗಿತ್ತು.
19
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.
20
ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು.
21
ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
22
ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.
23
ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
24
ತರುವಾಯ ಪಿಸಿದ್ಯಸೀಮೆಯನ್ನು ಹಾದು ಪಂಫುಲ್ಯಸೀಮೆಗೆ ಬಂದು
25
ಅದಕ್ಕೆ ಸೇರಿರುವ ಪೆರ್ಗೆಯಲ್ಲಿ ಕರ್ತನ ವಾಕ್ಯವನ್ನು ಹೇಳಿದ ಮೇಲೆ ಅತಾಲ್ಯಕ್ಕೆ ಇಳಿದು ಅಲ್ಲಿಂದ ಸಮುದ್ರಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿದರು.
26
ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು.
27
ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.
28
ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28