bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 15
Acts 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 16 →
1
ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
2
ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.
3
ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
4
ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.
5
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.
6
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ
7
ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.
8
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.
9
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
11
ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು.
12
ಗುಂಪುಕೂಡಿದ್ದವರೆಲ್ಲರು ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
13
ಅವರು ಮಾತಾಡುವದನ್ನು ಮುಗಿಸಿದ ಮೇಲೆ ಯಾಕೋಬನು ಆ ಪ್ರಸ್ತಾಪವನ್ನು ಹಿಡಿದು ಹೇಳಿದ್ದೇನಂದರೆ -
14
ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15
ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ -
16
ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
17
ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು
18
ಆದಿಯಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ ಎಂದು ಬರೆದದೆ.
19
ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20
ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.
21
ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
22
ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು
23
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
24
ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು
25
ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.
27
ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
28
ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.
30
ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.
31
ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.
33
ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
35
ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
36
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
37
ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ
38
ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.
39
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
40
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು
41
ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28