bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 19
Acts 19
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 20 →
1
ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -
2
ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ ಎಂದು ಅವರನ್ನು ಕೇಳಲು ಅವರು ಅವನಿಗೆ - ಇಲ್ಲ, ಪವಿತ್ರಾತ್ಮವರವು ಉಂಟೆಂಬದನ್ನೇ ನಾವು ಕೇಳಲಿಲ್ಲ ಅಂದರು.
3
ಅವನು - ನೀವು ಯಾವದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ ಎಂದು ಕೇಳಿದ್ದಕ್ಕೆ ಅವರು - ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡೆವು ಅಂದರು.
4
ಅದಕ್ಕೆ ಪೌಲನು - ಯೋಹಾನನು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರವಾತನಲ್ಲಿ ಅಂದರೆ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬದಾಗಿ ಜನರಿಗೆ ಹೇಳಿದನು ಎಂದು ಹೇಳಲು
5
ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
6
ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
7
ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
8
ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.
9
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10
ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.
11
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
12
ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
13
ದೆವ್ವಬಿಡಿಸುವವರೆನಿಸಿಕೊಂಡು ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದೆವ್ವಹಿಡಿದವರ ಮೇಲೆ - ಪೌಲನು ಸಾರುವ ಯೇಸುವಿನ ಆಣೆ ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವದಕ್ಕೆ ತೊಡಗಿದರು.
14
ಮಹಾಯಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳು ಹಾಗೆ ಮಾಡುತ್ತಿದ್ದರು.
15
ಆದರೆ ದೆವ್ವವು ಅವರಲ್ಲಿ ಇಬ್ಬರಿಗೆ - ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ನೀವಾದರೆ ಯಾರು? ಎಂದು ಹೇಳಿತು;
16
ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.
17
ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.
18
ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂತು. ಆತನನ್ನು ನಂಬಿದವರಲ್ಲಿ ಅನೇಕರು ಬಂದು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡು ತಿಳಿಸಿದರು.
19
ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳೀ ನಾಣ್ಯ ಆಯಿತೆಂದು ತಿಳಿದುಕೊಂಡರು.
20
ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
21
ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.
22
ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು.
23
ಆ ಕಾಲದಲ್ಲಿ ಕ್ರಿಸ್ತ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24
ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು.
25
ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರಿಸಿ ಅವರಿಗೆ - ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.
26
ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.
27
ಇದರಿಂದ ನಮ್ಮ ಉದ್ಯೋಗಕ್ಕೆ ಅಪಕೀರ್ತಿ ಬರುವ ಹಾಗಿರುವದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ ಎಲ್ಲಾ ಆಸ್ಯಸೀಮೆಯೂ ಲೋಕವೂ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆಯೂ ಗಂಡಾಂತರವುಂಟೆಂದು ಹೇಳಿದನು.
28
ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.
29
ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.
30
ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31
ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಅವನಿಗೆ ಸ್ನೇಹಿತರಾಗಿದ್ದದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ - ನೀನು ನಾಟಕಶಾಲೆಯೊಳಗೆ ಹೋಗಿ ನಿನ್ನನ್ನು ಅಪಾಯಕ್ಕೆ ಗುರಿಮಾಡಿಕೊಳ್ಳಬೇಡ ಎಂದು ಬೇಡಿಕೊಂಡರು.
32
ಸಭೆಯು ಗಲಿಬಿಲಿಯಾಯಿತು, ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿ ಬಂದಿದ್ದ ಕಾರಣವು ಗೊತ್ತಿರಲಿಲ್ಲ. ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು.
33
ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.
34
ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಎರಡು ಗಂಟೆ ಹೊತ್ತು ಕೂಗಿದರು.
35
ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ?
36
ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
37
ನೀವು ತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
38
ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ಒಂದು ವ್ಯವಹಾರವಿದ್ದರೆ ನ್ಯಾಯಸ್ಥಾನಗಳುಂಟು, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯವಾಡಿಕೊಳ್ಳಲಿ.
39
ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
40
ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.
41
ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28