bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 2
Acts 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 3 →
1
ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.
2
ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3
ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು.
4
ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.
5
ಆಕಾಶದ ಕೆಳಗಿರುವ ಎಲ್ಲಾ ದೇಶದವರೊಳಗಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇವಿುನಲ್ಲಿ ವಾಸವಾಗಿದ್ದರು.
6
ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು.
7
ಎಲ್ಲರು ಆಶ್ಚರ್ಯದಿಂದ ಬೆರಗಾಗಿ - ಇಗೋ, ಮಾತಾಡುತ್ತಿರುವ ಇವರೆಲ್ಲರು ಗಲಿಲಾಯದವರಲ್ಲವೇ.
8
ನಾವು ಪ್ರತಿಯೊಬ್ಬರು ನಮ್ಮ ನಮ್ಮ ಹುಟ್ಟುಭಾಷೆಯಲ್ಲಿ ಇವರು ಮಾತಾಡುವದನ್ನು ಕೇಳುತ್ತೇವಲ್ಲಾ, ಇದು ಹೇಗೆ?
9
ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,
10
ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ
11
ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.
12
ಎಲ್ಲರೂ ಬೆರಗಾಗಿ ಕಳವಳಗೊಂಡು - ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
13
ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು.
14
ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;
15
ನೀವು ಭಾವಿಸಿದಂತೆ ಇವರು ಅಮಲೇರಿದವರಲ್ಲ; ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16
ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿ. ಅದೇನಂದರೆ -
17
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18
ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸುವರು.
19
ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು;
21
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.
22
ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23
ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.
24
ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.
25
ಆತನ ವಿಷಯದಲ್ಲಿ ದಾವೀದನು - ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವದನ್ನು ನೋಡುತ್ತಿದ್ದೆನು. ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26
ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು. ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವದು;
27
ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
28
ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.
29
ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.
30
ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ
31
ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು.
32
ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ
34
ನೀವು ನೋಡಿ ಕೇಳುವದನ್ನು ಸುರಿಸಿದ್ದಾನೆ. ದಾವೀದನು ಆಕಾಶಕ್ಕೆ ಏರಿಹೋಗಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ - ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದೇ.
36
ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.
37
ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು
38
ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;
39
ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.
40
ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.
41
ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.
42
ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
43
ಎಲ್ಲರಿಗೂ ಭಯ ಉಂಟಾಯಿತು, ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಅಪೊಸ್ತಲರ ಕೈಯಿಂದ ನಡೆದವು.
44
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ
45
ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.
46
ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;
47
ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28