bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 20
Acts 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 21 →
1
ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.
2
ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.
3
ಅಲ್ಲಿ ಮೂರು ತಿಂಗಳು ಕಳೆದ ಮೇಲೆ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರಲ್ಲಿ ಒಳಸಂಚು ಹುಟ್ಟಿದ್ದರಿಂದ ಅವನು ಮಕೆದೋನ್ಯದ ಮೇಲೆ ಹಿಂತಿರುಗಿ ಹೋಗುವದಕ್ಕೆ ತೀರ್ಮಾನಮಾಡಿದನು.
4
ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.
5
ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
6
ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.
7
ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.
8
ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
9
ಯೂತಿಖನೆಂಬ ಒಬ್ಬ ಯೌನವಸ್ಥನು ಕಿಟಿಕಿಯಲ್ಲಿ ಕೂತುಕೊಂಡು ಗಾಢನಿದ್ರೆಯಿಂದ ತೂಕಡಿಸಿದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನು ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದನು; ಅವನನ್ನು ಎತ್ತಿನೋಡುವಾಗ ಸತ್ತಿದ್ದನು.
10
ಆದರೆ ಪೌಲನು ಇಳಿದುಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು - ಗೋಳಾಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
11
ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಸಲ್ಲಾಪಮಾಡಿ ಹಾಗೆ ಹೊರಟುಹೋದನು.
12
ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
13
ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರಪ್ರಯಾಣ ಮಾಡಿದೆವು. ಪೌಲನು ತಾನು ಕಾಲುನಡೆಯಾಗಿ ಹೋಗಬೇಕೆಂದು ಹಾಗೆಯೇ ನಮಗೆ ಅಪ್ಪಣೆ ಮಾಡಿದ್ದನು.
14
ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ವಿುತಿಲೇನೆಗೆ ಬಂದೆವು.
15
ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿನ ಹತ್ತರ ಬಂದೆವು. ಅದರ ಮರುದಿನ ವಿುಲೇತಕ್ಕೆ ಸೇರಿದೆವು.
16
ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.
17
ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.
18
ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ - ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲದಲ್ಲಿಯೂ ಹೇಗೆ ನಡಕೊಂಡೆನೆಂಬದನ್ನು ನೀವೇ ಬಲ್ಲಿರಿ.
19
ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.
20
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ
21
ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.
22
ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ.
23
ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.
24
ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.
25
ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.
26
ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.
27
ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.
28
ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29
ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.
30
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
31
ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.
32
ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.
33
ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.
34
ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
35
ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.
36
ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.
37
ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28