bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 21
Acts 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 22 →
1
ನಾವು ಪ್ರಯಾಸದಿಂದ ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೆಟ್ಟಗೆ ಹೋಗಿ ಕೋಸ್ ದ್ವೀಪಕ್ಕೆ ಸೇರಿದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.
2
ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
3
ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
4
ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.
5
ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ
6
ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರಿಗಿ ತಮ್ಮತಮ್ಮ ಮನೆಗಳಿಗೆ ಹೋದರು.
7
ನಾವು ತೂರ್ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು
8
ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.
9
ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
10
ನಾವು ಅಲ್ಲಿ ಅನೇಕ ದಿವಸಗಳು ಇದ್ದ ಮೇಲೆ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು
11
ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.
12
ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.
13
ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.
14
ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.
15
ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇವಿುಗೆ ಹೊರಟೆವು.
16
ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ಕರಕೊಂಡು ಹೋದರು. ಆ ಮನೆಯವನು ಆದಿ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
17
ನಾವು ಯೆರೂಸಲೇವಿುಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
18
ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು.
19
ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
20
ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.
21
ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.
22
ಹೀಗಿರುವಲ್ಲಿ ಏನು ಮಾಡಬೇಕು? ನೀನು ಬಂದಿರುವದನ್ನು ಹೇಗೂ ಕೇಳುವರು.
23
ಆದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ವ್ರತಹಿಡಿದವರು ನಾಲ್ಕುಮಂದಿ ಇದ್ದಾರೆ.
24
ನೀನು ಅವರನ್ನು ಕರೆದುಕೊಂಡು ಹೋಗಿ ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ವ್ರತವನ್ನು ತೀರಿಸಿಕೊಳ್ಳುವದಕ್ಕಾಗಿ ಅವರಿಗೋಸ್ಕರ ಹಣ ವೆಚ್ಚಮಾಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ ನೀನಾದರೂ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ ಎಂತಲೂ ತಿಳುಕೊಳ್ಳುವರು.
25
ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು.
26
ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.
27
ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -
28
ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.
29
ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
30
ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
31
ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇವಿುನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲವಿುನ ಸಹಸ್ರಾಧಿಪತಿಗೆ ವರದಿ ಬಂತು.
32
ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
33
ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -
34
ಇವನಾರು? ಏನು ಮಾಡಿದ್ದಾನೆ ಎಂದು ಕೇಳಲು ಕೆಲವರು ಹೀಗೆ ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿವಿುತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
35
ಪೌಲನು ಮೆಟ್ಲುಗಳ ಮೇಲೆ ಬಂದಾಗ ಜನರ ನೂಕಾಟದ ನಿವಿುತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
36
ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು ಅವನನ್ನು ಕೊಲ್ಲಿರಿ ಎಂದು ಕೂಗುತ್ತಿದ್ದರು.
37
ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?
38
ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.
39
ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
40
ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28