bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 4
Acts 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 5 →
1
ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ
2
ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು
3
ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
4
ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.
5
ಮರುದಿನ ಯೆಹೂದ್ಯರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಯೆರೂಸಲೇವಿುನಲ್ಲಿ ಕೂಡಿಬಂದರು.
6
ಅನ್ನನೆಂಬ ಮಹಾಯಾಜಕನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಗಳೆಲ್ಲರೂ ಇದ್ದರು.
7
ಇವರು ಪೇತ್ರ ಯೋಹಾನರನ್ನು ನಡುವೆ ನಿಲ್ಲಿಸಿ - ನೀವು ಎಂಥಾ ಶಕ್ತಿಯಿಂದ ಇಲ್ಲವೆ ಎಂಥಾ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಲು
8
ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,
9
ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಯಾತರಿಂದ ನೆಟ್ಟಗಾಯಿತು ಎಂಬದಾಗಿ ನಮ್ಮನ್ನು ಈ ಹೊತ್ತು ವಿಚಾರಣೆ ಮಾಡುವದಾದರೆ
10
ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.
11
ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.
12
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
13
ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.
14
ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.
15
ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು -
16
ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು.
17
ಆದರೆ ಇದು ಜನರಲ್ಲಿ ಇನ್ನೂ ಹಬ್ಬದಂತೆ ಮುಂದೆ ಆ ಹೆಸರನ್ನು ಎತ್ತಿ ಯಾರ ಸಂಗಡಲೂ ಮಾತಾಡಬಾರದೆಂದು ಅವರನ್ನು ಬೆದರಿಸೋಣ ಎಂಬದಾಗಿ ಒಬ್ಬರ ಕೂಡೊಬ್ಬರು ಆಲೋಚನೆ ಮಾಡಿಕೊಂಡು
18
ಅವರನ್ನು ಕರೆಯಿಸಿ - ಆ ಯೇಸುವಿನ ಹೆಸರನ್ನು ಎತ್ತಿ ಹೇಗೂ ಮಾತಾಡಬಾರದು, ಉಪದೇಶ ಮಾಡಲೂಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
19
ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;
20
ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.
21
ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.
22
ಈ ಸೂಚಕಕಾರ್ಯದಿಂದ ಸ್ವಸ್ಥತೆಹೊಂದಿದ ಆ ಮನುಷ್ಯನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
23
ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
24
ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
25
ನೀನು ಪವಿತ್ರಾತ್ಮ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ - ಅನ್ಯಜನಗಳು ಯಾಕೆ ರೇಗಿದರು? ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯಾಕೆ ಯೋಚಿಸಿದರು?
26
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.
27
ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು
28
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.
29
ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.
31
ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.
32
ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.
33
ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.
34
ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ
35
ಬಂದ ಕ್ರಯವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯದಂತೆ ಹಂಚಿಕೊಡುತ್ತಿದ್ದರು.
36
ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.
37
ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28