bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Amos 2
Amos 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 3 →
1
ಯೆಹೋವನು ಇಂತೆನ್ನುತ್ತಾನೆ - ಮೋವಾಬು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಎದೋವಿುನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿತಷ್ಟೆ.
2
ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು.
3
ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.
4
ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;
5
ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.
6
ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;
7
ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;
8
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
9
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
10
[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,
11
ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ.
12
ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ.
13
ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.
14
ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,
15
ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;
16
ಆ ದಿನದಲ್ಲಿ ಶೂರರೊಳಗೆ ಧೀರನಾದವನೂ ಬೆತ್ತಲೆಯಾಗಿ ಓಡಿ ಹೋಗುವನು; ಇದು ಯೆಹೋವನ ನುಡಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 3 →
All chapters:
1
2
3
4
5
6
7
8
9