bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Amos 9
Amos 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
1
ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
2
ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;
3
ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;
4
ಶತ್ರುವಶವಾಗಿ ಸೆರೆಗೆ ಹೋದರೂ ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವದು; ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.
5
ಆಹಾ, ಸೇನಾಧೀಶ್ವರದೇವರಾದ ಕರ್ತನು ಭೂವಿುಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿಹೋಗುತ್ತದೆ, ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುತ್ತದೆ.
6
ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.
7
ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?
8
ಆಹಾ, ಕರ್ತನಾದ ಯೆಹೋವನೆಂಬ ನಾನು ಪಾಪಮಯರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಅದನ್ನು ಭೂಮಂಡಲದೊಳಗಿಂದ ನಾಶಮಾಡುವೆನು; ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು. ಇದು ಯೆಹೋವನ ನುಡಿ.
9
ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.
10
ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.
11
ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;
12
ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.
13
ಯೆಹೋವನು ಇಂತೆನ್ನುತ್ತಾನೆ - ಆಹಾ, ಮುಂದಿನ ಕಾಲದಲ್ಲಿ ಉಳುವವನು ಕೊಯ್ಯುವವನ ಹಿಂದೆ, ದ್ರಾಕ್ಷೆತುಳಿಯುವವನು ಬಿತ್ತುವವನ ಹಿಂದೆ ಒತ್ತಿಕೊಂಡು ಹೋಗುವರು; ಬೆಟ್ಟಗಳು ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುತ್ತವೋ ಎಂಬಂತಿರುವವು.
14
ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.
15
ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
All chapters:
1
2
3
4
5
6
7
8
9