bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Daniel 1
Daniel 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
1
ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರುಷದಲ್ಲಿ ಬಾಬೆಲಿನ ರಾಜನಾದ ನೆಬೂಕದ್ನೆಚ್ಚರನು ಯೆರೂಸಲೇವಿುಗೆ ಬಂದು ಮುತ್ತಿಗೆ ಹಾಕಿದನು.
2
ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
3
ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯನಾದ ಅಶ್ಪೆನಜನಿಗೆ - ನೀನು ಇಸ್ರಾಯೇಲ್ಯರಲ್ಲಿ ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ
4
ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.
5
ಇದಲ್ಲದೆ ಇನ್ನು ಮುಂದೆ ಅವರು ಸನ್ನಿಧಿಸೇವಕರಾಗಲೆಂದು ತನ್ನ ಭೋಜನಪದಾರ್ಥಗಳನ್ನೂ ತಾನು ಕುಡಿಯುವ ದ್ರಾಕ್ಷಾರಸವನ್ನೂ ಅವರಿಗೆ ದಿನವಹಿ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರುಷ ಪೋಷಿಸಬೇಕು ಎಂದು ಆಜ್ಞಾಪಿಸಿದನು.
6
ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.
7
ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
8
ದಾನಿಯೇಲನು ತಾನು ರಾಜನ ಭೋಜನಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ - ನಾನು ಅಶುದ್ಧನಾಗಲಾರೆ, ಕ್ಷವಿುಸು ಎಂದು ವಿಜ್ಞಾಪಿಸಿದಾಗ
9
ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.
10
ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ - ನಿಮಗೆ ಆಹಾರಪಾನಗಳನ್ನು ಏರ್ಪಡಿಸಿದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವದನ್ನು ನೋಡುವನೆಂದು ಭಯಪಡುತ್ತೇನೆ; ರಾಜನು ನನ್ನ ತಲೆಯನ್ನು ತೆಗಿಸಲು ಕಾರಣರಾದೀರಿ ಎಂದು ಹೇಳಿದನು.
11
ದಾನಿಯೇಲನು ತನ್ನನ್ನೂ ಹನನ್ಯ, ಮೀಶಾಯೇಲ, ಅಜರ್ಯ, ಇವರನ್ನೂ ನೋಡಿಕೊಳ್ಳುವದಕ್ಕೆ ಕಂಚುಕಿಯರ ಅಧ್ಯಕ್ಷನು ನೇವಿುಸಿದ್ದ ವಿಚಾರಕನಿಗೆ -
12
ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಿನ್ನ ಸೇವಕರಾದ ನಮ್ಮನ್ನು ಪರೀಕ್ಷಿಸು; ಆಹಾರಕ್ಕೆ ಕಾಯಿಪಲ್ಯ, ಪಾನಕ್ಕೆ ನೀರು ನಮಗೆ ಒದಗಲಿ;
13
ಆಮೇಲೆ ನಮ್ಮ ಮುಖಗಳನ್ನೂ ರಾಜನ ಆಹಾರವನ್ನು ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು; ನೋಡಿದ್ದಕ್ಕೆ ತಕ್ಕ ಹಾಗೆ ನಿನ್ನ ಸೇವಕರಿಗೆ ನಡಿಸು ಎಂದು ಬಿನ್ನವಿಸಲು
14
ಅವನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನ ಪರೀಕ್ಷಿಸಿದನು.
15
ಅವರು ಹತ್ತು ದಿನಗಳ ಮೇಲೆ ರಾಜನ ಆಹಾರವನ್ನು ಉಣ್ಣುತ್ತಿದ್ದ ಸಕಲ ಯುವಕರಿಗಿಂತ ಸುಂದರರಾಗಿಯೂ ಪುಷ್ಟರಾಗಿಯೂ ಕಾಣಿಸಿದರು.
16
ಅಂದಿನಿಂದ ವಿಚಾರಕನು ಅವರಿಗೆ ನೇಮಕವಾದ ಭೋಜನ ಪದಾರ್ಥಗಳನ್ನೂ ಅವರು ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದಿಟ್ಟು ಕಾಯಿಪಲ್ಯಗಳನ್ನು ಕೊಡುತ್ತಾ ಬಂದನು.
17
ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.
18
ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು.
19
ರಾಜನು ಅವರ ಸಂಗಡ ಮಾತಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ, ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.
20
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
21
ದಾನಿಯೇಲನು ರಾಜನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
All chapters:
1
2
3
4
5
6
7
8
9
10
11
12