bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Daniel 10
Daniel 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 11 →
1
ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.
2
ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
3
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
4
ಮೊದಲನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲೆಂಬ ಮಹಾನದಿಯ ದಡದ ಮೇಲೆ ಇದ್ದು
5
ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;
6
ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.
7
ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
8
ನಾನು ಏಕಾಕಿಯಾಗಿ ಉಳಿದು ಆ ಅದ್ಭುತದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಿತ್ರಾಣನಾದೆನು.
9
ಆದರೂ ಅವನು ಮಾತಾಡುವ ಸದ್ದನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಡಿಮೊಗವಾಗಿ ಅಡ್ಡಬಿದ್ದಿದ್ದೆನು.
10
ಆಹಾ, ನನಗೆ ಹಸ್ತಸ್ಪರ್ಶವಾಯಿತು; ನಾನು ಗಡಗಡನೆ ನಡುಗುತ್ತಾ ಮೊಣಕಾಲೂರಿ ಅಂಗೈಗಳ ಮೇಲೆ ನಿಲ್ಲುವಂತೆ ಮಾಡಿತು.
11
ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.
12
ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.
13
ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]
14
ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.
15
ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.
16
ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ.
17
ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸುರೇ ಇಲ್ಲ ಎಂದು ಹೇಳಿದೆನು.
18
ಮನುಷ್ಯಸದೃಶ್ಯನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.
19
ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು
20
ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ರಾಜ್ಯದ ದಿವ್ಯಪಾಲಕನು ಎದುರುಬೀಳುವನು.
21
(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 11 →
All chapters:
1
2
3
4
5
6
7
8
9
10
11
12