bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Daniel 11
Daniel 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
1
ಮೇದ್ಯಯನಾದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ ನಾನೇ ಮೀಕಾಯೇಲನಿಗೆ ಬೆಂಬಲ ಕೊಟ್ಟು ಆಶ್ರಯನಾಗಿ ನಿಂತೆನು.
2
ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು. ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
3
ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.
4
ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.
5
ದಕ್ಷಿಣದಿಕ್ಕಿನ ರಾಜನೂ ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು; ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು; ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವದು.
6
ಕೆಲವು ವರುಷಗಳ ಮೇಲೆ ಅವರು ಸೇರಿಕೊಳ್ಳುವರು; ದಕ್ಷಿಣರಾಜನ ಕುಮಾರಿಯು ಉತ್ತರದಿಕ್ಕಿನ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು; ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಳು; ಅವನೂ ಅವನ ತೋಳೂ ನಿಲ್ಲವು; ಅವಳೂ ಅವಳನ್ನು ಕರತಂದವರೂ ಪಡೆದವನೂ ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.
7
ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯು ಅದರ ಸ್ಥಾನದಲ್ಲಿ ನಿಂತು ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ ಅಲ್ಲಿನವರಿಗೆ ಮಾಡುವಷ್ಟು ಮಾಡಿ ಗೆದ್ದು
8
ಅವನ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಐಗುಪ್ತಕ್ಕೆ ಬಂದು ಕೆಲವು ವರುಷಗಳ ತನಕ ಉತ್ತರರಾಜನ ತಂಟೆಗೆ ಹೋಗುವದಿಲ್ಲ.
9
ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದೊಳಗೆ ನುಗ್ಗಿ ಸ್ವದೇಶಕ್ಕೆ ಹಿಂದಿರುಗುವನು.
10
ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.
11
ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು; ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲಾ ದಕ್ಷಿಣರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವದು;
12
ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.
13
ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹುವರುಷಗಳ ಕಾಲವಾದ ನಂತರ ಮಹಾಸೈನ್ಯದಿಂದಲೂ ಅಧಿಕಸನ್ನಾಹದಿಂದಲೂ ಸಮೇತನಾಗಿ ಬರುವನು.
14
ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರುನಿಲ್ಲುವರು; ಇದಲ್ಲದೆ ನಿನ್ನ ಜನರಲ್ಲಿ ದುರಾಗ್ರಹಿಗಳು ಕನಸನ್ನು ನಿಜಮಾಡಬೇಕೆಂದು ದಂಗೆ ಏಳುವರು; ಆದರೆ ಬಿದ್ದುಹೋಗುವರು.
15
ಉತ್ತರರಾಜನು ಬಂದು ದಿಬ್ಬಹಾಕಿ ಕೋಟೆಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
16
ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.
17
ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದಮಾಡಿಕೊಳ್ಳುವನು; ಅವನ ರಾಜ್ಯದ ಹಾನಿಗಾಗಿ ಅವನಿಗೆ ಹೆಣ್ಣುಮಗಳನ್ನು ಕೊಡುವನು; ಆದರೆ ಆ ಉಪಾಯವೂ ನಿಲ್ಲದು, ತನಗೆ ಅನುಕೂಲಿಸದು.
18
ಆಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹು ದೇಶಗಳನ್ನು ಆಕ್ರವಿುಸುವನು; ಆದರೆ ಅವನು ಮಾಡುವ ಅವಮಾನವನ್ನು ಒಬ್ಬ ಸರದಾರನು ನಿಲ್ಲಿಸಿಬಿಡುವದಲ್ಲದೆ ಅದು ಅವನಿಗೇ ತಗಲುವಂತೆ ಮಾಡುವನು.
19
ಆಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿಬಿದ್ದು ಇಲ್ಲವಾಗುವನು.
20
ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.
21
ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
22
ತುಂಬಿತುಳುಕುವ ವ್ಯೂಹಗಳೂ ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.
23
ಅವನ ಸಂಗಡ ಒಪ್ಪಂದಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು; ಕೊಂಚ ಜನದ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.
24
ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು; ತಂದೆತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು; ಸೂರೆಸುಲಿಗೆ ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು; ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.
25
ಅವನು ದೊಡ್ಡ ದಂಡೆತ್ತಿ ದಕ್ಷಿಣರಾಜನಿಗೆ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯತಂದುಕೊಳ್ಳಲು ದಕ್ಷಿಣರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು; ಆದರೆ ನಿಲ್ಲಲಾರನು; ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವರು.
26
ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರರಾಜನ ಸೈನ್ಯವು ತುಂಬಿತುಳುಕುವದು; ಬಹು ಜನರು ಹತರಾಗಿ ಬೀಳುವರು.
27
ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.
28
ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
29
ಕ್ಲುಪ್ತಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ನುಗ್ಗುವನು; ಆದರೆ ಮೊದಲು ಆದಂತೆ ಎರಡನೆಯ ಸಲ ಆಗದು.
30
ಅವನಿಗೆ ವಿರುದ್ಧವಾಗಿ ಕಿತ್ತೀವಿುನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ಮಾಡುವಷ್ಟು ಮಾಡುವನು; ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆ ತೊರೆದವರನ್ನು ಕಟಾಕ್ಷಿಸುವನು.
31
ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.
32
ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.
33
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.
34
ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆಮೇಲೆ ಬಹುಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.
35
ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.
36
ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.
37
ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.
38
ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು.
39
ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರವಿುಸುವನು; ಯಾರನ್ನು ಕಟಾಕ್ಷಿಸುವನೋ ಅವರಿಗೆ ಮಹಿಮೆ ಹೆಚ್ಚುವದು; ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಕ್ರಯಕ್ಕೆ ಹಂಚುವನು.
40
ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.
41
ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
42
ಅವನು ದೇಶಗಳ ಮೇಲೆ ಕೈಮಾಡಲು ಐಗುಪ್ತದೇಶವೂ ತನ್ನನ್ನು ರಕ್ಷಿಸಿಕೊಳ್ಳದು.
43
ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನೂ ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು; ಲೂಬ್ಯರೂ ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.
44
ಹೀಗಿರಲು ಮೂಡಲಿಂದಲೂ ಬಡಗಲಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವದು; ಅವನು ಅತಿರೋಷಗೊಂಡು ಬಹು ಜನರನ್ನು ಧ್ವಂಸಿಸಿ ನಿರ್ನಾಮ ಮಾಡುವದಕ್ಕೆ ಹೊರಡುವನು.
45
ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
All chapters:
1
2
3
4
5
6
7
8
9
10
11
12