bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Daniel 5
Daniel 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 6 →
1
ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
2
ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
3
ಯೆರೂಸಲೇವಿುನ ದೇವಾಲಯದ ನಡುಗುಡಿಯಿಂದ ಸೂರೆಯಾದ ಬಂಗಾರದ ಪಾತ್ರೆಗಳನ್ನು ತರಲು ರಾಜನೂ ಅವನ ಮುಖಂಡರೂ ಪತ್ನ್ಯುಪಪತ್ನಿಯರೂ ಅವುಗಳಲ್ಲಿ ಕುಡಿದರು.
4
ದ್ರಾಕ್ಷಾರಸವನ್ನು ಕುಡಿದು ಬಂಗಾರಬೆಳ್ಳಿ ತಾಮ್ರಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.
5
ಆಗಲೇ ಒಬ್ಬನ ಕೈಯ ಬೆರಳುಗಳು ಬಂದು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರಹ ಬರೆದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.
6
ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
7
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.
8
ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.
9
ಆಗ ರಾಜನಾದ ಬೇಲ್ಶಚ್ಚರನು ಬಹಳ ಕಳವಳಗೊಂಡು ಕಳೆಗುಂದಿದನು, ಅವನ ಮುಖಂಡರೂ ಬೆಪ್ಪಾದರು.
10
ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!
11
ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;
12
ಹೌದು, ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ ಜ್ಞಾನವೂ ವಿವೇಕವೂ ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ ಒಗಟುಬಿಡಿಸುವ ಚಮತ್ಕಾರವೂ ಗುಂಜುಗಂಟುಬಿಚ್ಚುವ ಚಾತುರ್ಯವೂ ತೋರಿಬಂದದರಿಂದಲೇ ಹಾಗೆ ನೇವಿುಸಿದನು. ಈಗ ಈ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಎಂದಳು.
13
ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?
14
ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.
15
ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.
16
ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.
17
ಆಗ ದಾನಿಯೇಲನು ಸನ್ನಿಧಿಯಲ್ಲಿ - ನಿನ್ನ ದಾನಗಳು ನಿನಗೇ ಇರಲಿ, ನಿನ್ನ ಬಹುಮಾನಗಳು ಮತ್ತೊಬ್ಬನಿಗಾಗಲಿ; ಆದರೆ ನಾನು ಈ ಬರಹವನ್ನು ಓದಿ ಇದರ ಅರ್ಥವನ್ನು ರಾಜನಿಗೆ ತಿಳಿಸುವೆನು.
18
ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;
19
ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.
20
ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;
21
ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು, ಕಾಡುಕತ್ತೆಗಳೊಂದಿಗೆ ವಾಸಿಸಿದನು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅವರ ಮೇಲೆ ತನಗೆ ಬೇಕಾದವರನ್ನು ನೇವಿುಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.
22
ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ;
23
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;
24
ಹೀಗಿರಲು ಆ ಹಸ್ತವು ದೇವರ ಸನ್ನಿಧಿಯಿಂದ ಬಂದು ಈ ಬರಹವನ್ನು ಬರೆಯಿತು.
25
ಬರೆದ ಬರಹವು ಇದೇ - ಮೆನೇ, ಮೆನೇ, ತೆಕೇಲ್, ಉಫರ್ಸಿನ್.
26
ಇದರ ಅರ್ಥವು ಹೀಗಿದೆ ಮೆನೇ ಅಂದರೆ ದೇವರು ನಿನ್ನ ಆಳಿಕೆಯ ಕಾಲವನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾನೆ;
27
ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;
28
ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.
29
ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.
30
ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
31
ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 6 →
All chapters:
1
2
3
4
5
6
7
8
9
10
11
12