bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Daniel 9
Daniel 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 10 →
1
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ
2
ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು
3
ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.
4
ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,
5
ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು
6
ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.
7
ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.
8
ಸ್ವಾಮೀ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಪ್ರಧಾನರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
9
ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;
10
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತುಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
11
ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.
12
[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
13
ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
14
ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
15
ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
16
ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.
17
ನಮ್ಮ ದೇವರೇ, ನಿನ್ನ ಸೇವಕನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಲಾಲಿಸು; ಹಾಳಾಗಿರುವ ನಿನ್ನ ಪವಿತ್ರಾಲಯವನ್ನು ಕರ್ತನಾದ ನಿನ್ನ ಹೆಸರಿನ ನಿವಿುತ್ತವೇ ಪ್ರಸನ್ನಮುಖದಿಂದ ನೋಡು.
18
ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.
19
ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!
20
ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ
21
ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ
22
ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು;
23
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
24
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
25
ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
26
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.
27
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 10 →
All chapters:
1
2
3
4
5
6
7
8
9
10
11
12