bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 1
Deuteronomy 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 2 →
1
ಯೊರ್ದನ್ ಹೊಳೆಯ ಆಚೆ, ಪಾರಾನಿಗೂ ತೋಫೆಲ್ ಲಾಬಾನ್ ಹಚೇರೋತ್ ದೀಜಾಹಾಬ್ ಎಂಬ ಸ್ಥಳಗಳಿಗೂ ನಡುವೆ, ಅರಣ್ಯದಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲ್ಯರೆಲ್ಲರಿಗೆ ಮಾಡಿದ ಉಪನ್ಯಾಸಗಳು.
2
[ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]
3
ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,
4
ಅಂದರೆ [ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ] ನಾಲ್ವತ್ತನೆಯ ವರುಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸಿದನು.
5
ಯೊರ್ದನ್ ಹೊಳೆಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವದಕ್ಕೆ ಪ್ರಾರಂಭಿಸಿ ಹೇಳಿದನು -
6
ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ - ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು;
7
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಅದಕ್ಕೆ ಸೇರಿದ ಪ್ರದೇಶವೆಲ್ಲಕ್ಕೂ ಪ್ರಯಾಣಮಾಡಿರಿ. ಅವು ಯಾವವಂದರೆ - ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೇಟೀಸ್ ಎಂಬ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶ ಇವುಗಳೇ.
8
ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ; ಯೆಹೋವನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೂ ಅವರ ಸಂತತಿಯವರಿಗೂ ಆ ದೇಶವನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ ಎಂದು ಆಜ್ಞಾಪಿಸಿದನು.
9
ಆ ಕಾಲದಲ್ಲಿ ನಾನು ನಿಮ್ಮ ಸಂಗಡ ಮಾತಾಡಿ - ನಿಮ್ಮ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ;
10
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.
11
ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.
12
ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ ಭಾರವನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವದು ಹೇಗೆ?
13
ಆದದರಿಂದ ನೀವು ಪ್ರತಿಯೊಂದು ಕುಲದಿಂದ ಪ್ರಸಿದ್ಧರಾದ ಬುದ್ಧಿವಿವೇಕವುಳ್ಳ ಪುರುಷರನ್ನು ಆರಿಸಿಕೊಳ್ಳಿರಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇವಿುಸುವೆನು ಎಂದು ಹೇಳಿದೆನು.
14
ಅದಕ್ಕೆ ನೀವು - ನಿನ್ನ ಆಲೋಚನೆಯಂತೆ ನಡೆಯುವದು ವಿಹಿತವಾದದ್ದೇ ಎಂದು ಉತ್ತರಕೊಟ್ಟಿರಿ.
15
ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.
16
ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
17
ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.
18
ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆ ಕೊಟ್ಟೆನು.
19
ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾರಣ್ಯದಲ್ಲಿ ನಡೆದು ಕಾದೇಶ್ಬರ್ನೇಯಕ್ಕೆ ಸೇರಿದೆವು.
20
ಆಗ ನಾನು - ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ;
21
ನಿಮ್ಮ ದೇವರಾದ ಯೆಹೋವನು ಆ ದೇಶವನ್ನು ನಿಮಗೇ ಕೊಟ್ಟಿದ್ದಾನೆ; ನಿಮ್ಮ ಪಿತೃಗಳ ದೇವರಾದ ಯೆಹೋವನು ಹೇಳಿದಂತೆ ಅದನ್ನು ಹತ್ತಿ ಸ್ವಾಧೀನಮಾಡಿಕೊಳ್ಳಿರಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕೆಂದು ಹೇಳಿದೆನು.
22
ಆಗ ನೀವೆಲ್ಲರೂ ನನ್ನ ಬಳಿಗೆ ಬಂದು - ನಮಗಿಂತ ಮುಂದಾಗಿ ಮನುಷ್ಯರನ್ನು ಕಳುಹಿಸುವೆವು; ಅವರು ನಮಗೋಸ್ಕರ ಆ ದೇಶವನ್ನು ಪರೀಕ್ಷಿಸಿ ನೋಡಿ ನಾವು ಹತ್ತಿ ಹೋಗಬೇಕಾದ ದಾರಿಯ ವಿಷಯದಲ್ಲೂ ಸೇರಬೇಕಾದ ಊರುಗಳ ವಿಷಯದಲ್ಲೂ ನಮಗೆ ವರ್ತಮಾನ ತಿಳಿಸಲಿ ಎಂದು ಹೇಳಿದಿರಿ.
23
ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.
24
ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ -
25
ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶವೆಂದು ನಮಗೆ ವರ್ತಮಾನ ತಿಳಿಸಿದರು.
26
ಆದರೂ ನೀವು ಹತ್ತಲೊಲ್ಲದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ನಿಮ್ಮ ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ -
27
ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.
28
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.
29
ಅದಕ್ಕೆ ನಾನು - ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.
30
ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು.
31
ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.
32
ಆದರೂ ನೀವು ನಿಮ್ಮ ದೇವರಾದ ಯೆಹೋವನನ್ನು ಇನ್ನೂ ನಂಬಲೇ ಇಲ್ಲ.
33
ನೀವು ಹೋಗಬೇಕಾದ ದಾರಿಯನ್ನು ತೋರಿಸುವದಕ್ಕೂ ದಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವದಕ್ಕೂ ರಾತ್ರಿಹೊತ್ತು ಬೆಂಕಿಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.
34
ಯೆಹೋವನು ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡು ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟಜನರಲ್ಲಿ ಯಾರೂ ನೋಡುವದಿಲ್ಲವೆಂದು ಪ್ರಮಾಣಮಾಡಿ -
36
ಯೆಫುನ್ನೆಯ ಮಗನಾದ ಕಾಲೇಬನೊಬ್ಬನೇ ಯೆಹೋವನನ್ನು ಮನಃಪೂರ್ವಕವಾಗಿ ಅನುಸರಿಸಿದದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನೆಂದು ಹೇಳಿದನು.
37
ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ;
38
ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.
39
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
40
ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಅರಣ್ಯಕ್ಕೆ ಹೊರಟುಹೋಗಿರಿ ಎಂದು ಆಜ್ಞಾಪಿಸಿದನು.
41
ಅದಕ್ಕೆ ನೀವು - ನಾವು ಯೆಹೋವನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು ಎಂದು ಉತ್ತರ ಕೊಟ್ಟು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವದಕ್ಕಿದ್ದಿರಿ.
42
ಆದರೆ ಯೆಹೋವನು ನನಗೆ - ನಾನು ಇವರ ಮಧ್ಯದಲ್ಲಿ ಇಲ್ಲವಾದದರಿಂದ ಇವರು ಸೋತು ಹೋಗುವರು; ಯುದ್ಧಮಾಡಲೂಬಾರದು, ಆ ಬೆಟ್ಟದ ಸೀಮೆಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು ಅಂದನು.
43
ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.
44
ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರೋಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.
45
ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ರಕ್ಷಿಸಲೂ ಇಲ್ಲ.
46
ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34