bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 10
Deuteronomy 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 11 →
1
ಆ ಕಾಲದಲ್ಲಿ ಯೆಹೋವನು ನನಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
2
ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕೆಂದು ಆಜ್ಞಾಪಿಸಿದನು.
3
ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
4
ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
5
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.
6
(ಇಸ್ರಾಯೇಲ್ಯರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನಿಗೆ ಸಮಾಧಿಮಾಡಿದರು; ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
7
ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
8
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.
9
ಆದದರಿಂದ ವಿುಕ್ಕ ಇಸ್ರಾಯೇಲ್ಯರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವಾಸ್ತ್ಯ.
10
ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
11
ತರುವಾಯ ಯೆಹೋವನು ನನಗೆ - ನೀನು ಈ ಜನರ ಮುಂದುಗಡೆಯಲ್ಲಿ ಹೊರಡು; ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ ಎಂದು ಆಜ್ಞಾಪಿಸಿದನು.
12
ಆದದರಿಂದ ಇಸ್ರಾಯೇಲ್ಯರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ ಆತನನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡುತ್ತಾ
13
ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವದನ್ನೇ ಹೊರತು ನಿಮ್ಮ ದೇವರಾದ ಯೆಹೋವನು ನಿವ್ಮಿುಂದ ಬೇರೇನು ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ;
14
ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;
15
ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು.
16
ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.
17
ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.
18
ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
19
ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
20
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.
21
ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
22
ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34