bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 22
Deuteronomy 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 23 →
1
ಸ್ವದೇಶದವನ ಎತ್ತಾಗಲಿ ಕುರಿಯಾಗಲಿ ದಾರಿತಪ್ಪಿ ಹೋಗಿರುವದನ್ನು ನೀವು ಕಂಡರೆ ಕಾಣದವರಂತೆ ಅದನ್ನು ಬಿಟ್ಟು ಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡುಹೋಗಿ ಕೊಡಲೇಬೇಕು.
2
ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆಹೋದರೆ ಆ ಪಶುವನ್ನು ನಿಮ್ಮ ಮನೆಗೆ ಹೊಡಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ತಿರಿಗಿ ಕೊಡಬೇಕು.
3
ಅವನ ಕತ್ತೆಯಾಗಲಿ ಬಟ್ಟೆಯಾಗಲಿ ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇ ಬಾರದು.
4
ಸ್ವದೇಶದವನ ಕತ್ತೆಯಾಗಲಿ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
5
ಸ್ತ್ರೀಯು ಪುರುಷವೇಷವನ್ನೂ ಪುರುಷನು ಸ್ತ್ರೀವೇಷವನ್ನೂ ಹಾಕಿಕೊಳ್ಳಕೂಡದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಹೇಯರು.
6
ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ತತ್ತಿಗಳು ಇದ್ದು ಅವುಗಳ ಮೇಲೆ ತಾಯಿ ಹೊದಗಿರುವದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
7
ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸುಂಟಾಗುವದು. ಮತ್ತು ಬಹುಕಾಲ ಬಾಳುವಿರಿ.
8
ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
9
ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.
10
ಎತ್ತನ್ನೂ ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಬಾರದು.
11
ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
12
ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.
13
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ ಅವಳ ವಿಷಯದಲ್ಲಿ ಸುಮ್ಮಸುಮ್ಮನೆ ಕೆಟ್ಟ ಮಾತುಗಳನ್ನು ಆಡಿ -
14
ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ
15
ಅವಳ ತಾಯಿತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕವಿಲ್ಲದವಳು ಎಂಬುದಕ್ಕೆ ನಿದರ್ಶನವನ್ನು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
16
ತಂದೆ ಅವರಿಗೆ - ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
17
ಇವನು ಅವಳನ್ನು ದ್ವೇಷಿಸಿ ಪರಪುರುಷಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲವೆಂಬದಕ್ಕೆ ಇದೇ ಪ್ರಮಾಣ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು.
18
ಇಸ್ರಾಯೇಲ್ಯಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪುಹೊರಿಸಿದ್ದರಿಂದ
19
ಆ ಊರಿನ ಹಿರಿಯರು ಅವನನ್ನು ಹಿಡಿಸಿ ಹೊಡಿಸಿ ನೂರು ರೂಪಾಯಿ ದಂಡವನ್ನು ವಿಧಿಸಿ ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.
20
ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕಮಾಡಿದವಳೇ ಎಂದು ತಿಳಿದುಬಂದರೆ
21
ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
22
ಯಾವನಾದರೂ ಪರನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ಹೊರಬಿದ್ದರೆ ಆ ಸ್ತ್ರೀ ಪುರುಷರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.
23
ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗವಿುಸಿದರೆ
24
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
25
ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
26
ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವದು ಹೇಗೋ ಈ ಸಂಗತಿ ಹಾಗೆಯೇ ಆಯಿತು;
27
ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
28
ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗವಿುಸಿದ್ದು ಬೈಲಿಗೆ ಬಂದರೆ
29
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ರೂಪಾಯಿ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.
30
ತಂದೆಗೆ ಹೆಂಡತಿಯಾದವಳನ್ನು ಸಂಗವಿುಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವದು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34