bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 28
Deuteronomy 28
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 29 →
1
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
2
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಯಾವವಂದರೆ -
3
ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಶುಭವುಂಟಾಗುವದು.
4
ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವದು.
5
ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಶುಭವುಂಟಾಗುವದು.
6
ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವದು.
7
ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.
8
ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.
9
ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.
10
ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.
11
ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.
12
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.
13
ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ.
15
ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -
16
ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಅಶುಭವುಂಟಾಗುವದು.
17
ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು.
18
ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.
19
ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವದು.
20
ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.
21
ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.
22
ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.
23
ಮೇಲೆ ಆಕಾಶವು [ಮಳೆಸುರಿಸದೆ] ತಾಮ್ರದಂತೆಯೂ ಕೆಳಗೆ ಭೂವಿುಯು [ಬೆಳೆಕೊಡದೆ] ಕಬ್ಬಿಣದಂತೆಯೂ ಇರುವವು.
24
ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದರಿಂದ ನೀವು ನಾಶವಾಗಿ ಹೋಗುವಿರಿ.
25
ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
26
ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.
27
ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
28
ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು
29
ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.
30
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ.
31
ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.
32
ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.
33
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.
34
ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.
35
ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.
36
ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.
37
ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.
38
ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ವಿುಡತೆಯ ದಂಡು ಬಂದು ಅದನ್ನು ತಿಂದು ಬಿಡುವದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವದು;
39
ನೀವು ದ್ರಾಕ್ಷಾವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವದರಿಂದ ನೀವು ಕೂಡಿಸಿಕೊಳ್ಳುವದಿಲ್ಲ, ಅವುಗಳ ರಸವನ್ನು ರುಚಿನೋಡುವದಿಲ್ಲ.
40
ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವದಿಲ್ಲ.
41
ನಿಮಗೆ ಗಂಡು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವದರಿಂದ ನಿಮ್ಮ ಬಳಿಯಲ್ಲಿ ಇರುವದಿಲ್ಲ.
42
ನಿಮ್ಮ ಎಲ್ಲಾ ಮರಗಳೂ ಪೈರುಗಳೂ ವಿುಡತೆಯ ಪಾಲಾಗುವವು.
43
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
44
ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ಶಿರಸ್ಸಾಗುವರು.
45
ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.
46
ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.
47
ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆಹೋದದರಿಂದ ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು;
48
ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
49
ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.
50
ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ.
51
ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
52
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.
53
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
54
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.
56
ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು.
58
ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ
59
ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.
60
ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು.
61
ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.
62
ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.
63
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
64
ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.
65
ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
66
ಬದುಕುವೆವೋ ಇಲ್ಲವೋ ಎಂಬದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.
67
ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವದರಿಂದಲೂ ನೀವು ಹೊತ್ತಾರೆಯಲ್ಲಿ - ಅಯ್ಯೋ, ಅಯ್ಯೋ! ಸಾಯಂಕಾಲ ಯಾವಾಗ ಬರುವದೋ ಎಂದೂ ಸಾಯಂಕಾಲದಲ್ಲಿ - ಅಯ್ಯೋ, ಅಯ್ಯೋ! ಮರುದಿನ ಯಾವಾಗ ಬರುವದೋ ಎಂದೂ ಹೇಳುವಿರಿ.
68
ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34