bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 31
Deuteronomy 31
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 30
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 32 →
1
ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲ್ಯರೆಲ್ಲರಿಗೆ ತಿಳಿಸಿದನು.
2
ಅವನು ಅವರಿಗೆ - ನಾನು ಈಗ ನೂರಿಪ್ಪತ್ತು ವರುಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವದು ಇನ್ನು ನನ್ನಿಂದಾಗದು; ಯೆಹೋವನು ನನಗೆ - ನೀನು ಈ ಯೊರ್ದನ್ ಹೊಳೆಯನ್ನು ದಾಟಕೂಡದೆಂದು ಆಜ್ಞಾಪಿಸಿದ್ದಾನೆ.
3
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.
4
ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
5
ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
6
ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.
7
ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು;
8
ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು.
9
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -
10
ಪ್ರತಿ ಏಳು ವರುಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ
11
ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.
12
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.
13
ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಕಲಿತುಕೊಳ್ಳುವರು ಎಂದು ಹೇಳಿದನು.
14
ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
15
ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಬಳಿಯಲ್ಲಿ ನಿಂತಿತು.
16
ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
17
ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.
18
ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡಿಸುವದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.
19
ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.
20
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.
22
ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲ್ಯರಿಗೆ ಕಲಿಸಿದನು.
23
ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.
24
ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ
25
ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ -
26
ನೀವು ಈ ಧರ್ಮಶಾಸ್ತ್ರಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. [ಇಸ್ರಾಯೇಲ್ಯರೇ,] ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡುವದಾಗಿರಲಿ.
27
ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.
28
ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರೋಧವಾಗಿ ಸಾಕ್ಷಿಗಳಾಗುವದಕ್ಕೆ ಭೂಮ್ಯಾಕಾಶಗಳನ್ನು ಕರೆಯುವೆನು.
29
ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.
30
ಆಗ ಮೋಶೆ ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು; ಏನಂದರೆ -
← Chapter 30
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 32 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34