bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Deuteronomy 33
Deuteronomy 33
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 34 →
1
ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -
2
ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.
3
ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.
4
ಮೋಶೆಯು ಯಾಕೋಬ್ ಸಂತತಿಯವರಾದ ನಮಗೆ ಧರ್ಮಶಾಸ್ತ್ರವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ.
5
ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.
6
[ರೂಬೇನ್ ಕುಲದ ವಿಷಯದಲ್ಲಿ ಹೇಳಿದ್ದೇನಂದರೆ -] ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಮಂದಿಯುಳ್ಳದ್ದಾಗಿರುವದು.
7
ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.
8
ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.
9
ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.
10
ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
11
ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.
12
ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.
13
ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
14
ವರುಷ ವರುಷಕ್ಕೂ ತಿಂಗಳು ತಿಂಗಳಿಗೂ ಆಗುವ ಬೆಳೆ,
15
ಅನಾದಿಯಾದ ಪರ್ವತಗಳ ಉತ್ಪನ್ನ, ಶಾಶ್ವತವಾದ ಬೆಟ್ಟಗಳಿಂದುಂಟಾಗುವ ಮೇಲು,
16
ಭೂವಿುಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ [ಹೋರೇಬ್ಬೆಟ್ಟದಲ್ಲಿನ] ಮುಳ್ಳುಗಿಡದಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಕುಲದವರ ಶಿರಸ್ಸಿನ ಮೇಲೆ ಉಂಟಾಗಲಿ.
17
ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.
18
ಜೆಬುಲೂನ್ಯರ [ಮತ್ತು ಇಸ್ಸಾಕಾರ್ಯರ] ವಿಷಯದಲ್ಲಿ ಹೀಗಂದನು - ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರ್ರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರ್ರಿ.
19
ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು.
20
ಗಾದ್ ಕುಲದವರ ವಿಷಯದಲ್ಲಿ ಹೀಗಂದನು - ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು [ಶತ್ರುಗಳ] ಭುಜವನ್ನೂ ಶಿರಸ್ಸನ್ನೂ ಮುರಿಯುತ್ತಾರೆ.
21
ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವಾಸ್ತ್ಯವು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲ್ಯರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು.
22
ದಾನ್ಕುಲದ ವಿಷಯದಲ್ಲಿ ಹೀಗಂದನು - ದಾನ್ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ.
23
ನಫ್ತಾಲಿಕುಲದ ವಿಷಯದಲ್ಲಿ ಹೀಗಂದನು - ನಫ್ತಾಲಿಕುಲವೇ, ನೀನು ಯೆಹೋವನ ದಯೆಯನ್ನು ಹೊಂದಿ ಸಂತೃಪ್ತವಾದಿ; ಆತನ ಆಶೀರ್ವಾದದಿಂದ ನಿನಗೆ ಸಮೃದ್ಧಿಯುಂಟು. [ಕಿನ್ನೆರೆತ್] ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸ್ವಾಸ್ತ್ಯವಾಗಲಿ.
24
ಆಶೇರ್ ಕುಲದ ವಿಷಯದಲ್ಲಿ ಹೀಗಂದನು - ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
25
ನಿಮ್ಮ ಕೋಟೆಯ ಬಾಗಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರುವವು; ನೀವು ಇರುವವರೆಗೂ ನಿಮಗೆ ಬಲವು ಇರುವದು.
26
ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.
27
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;
28
ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್ಸಂಭವರು ಸುರಕ್ಷಿತರಾದರು.
29
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 34 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34